ಎಸ್.ಎಸ್.ಎಲ್.ಸಿ. ಮಕ್ಕಳಿಗೆ ಕಲಾಕುಂಚದಿಂದ ಪ್ರತಿಭಾ ಪುರಸ್ಕಾರ

Upayuktha
0

ದಾವಣಗೆರೆ: ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತೀ ವರ್ಷದಂತೆ ವರ್ಷವೂ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ ತಿಳಿಸಿದ್ದಾರೆ.

 

ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಪರಿಪೂರ್ಣ ಅಂಕಪಡೆದರೆ ಕಲಾಕುಂಚದಿಂದಕನ್ನಡ ಕೌಸ್ತುಭರಾಜ್ಯ ಪ್ರಶಸ್ತಿ, 625ಕ್ಕೆ 600ಕ್ಕೂ ಹೆಚ್ಚು ಅಂಕ ಪಡೆದ ಮಕ್ಕಳಿಗೆ ರಾಜ್ಯ ಮಟ್ಟದಲ್ಲಿಸರಸ್ವತಿ ಪುರಸ್ಕಾರರಾಜ್ಯ ಪ್ರಶಸ್ತಿ, ಪ್ರಥಮ ಭಾಷೆ ಕನ್ನಡದಲ್ಲಿ 125 ಕ್ಕೆ 120ರಿಂದ 124ರವರೆಗೆ ಅಂಕ ಪಡೆದ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿಕನ್ನಡ-ಕುವರ-ಕುವರಿ” ಜಿಲ್ಲಾ ಪ್ರಶಸ್ತಿ ವಿತರಿಸಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ಶೆಣೈ ಪ್ರಕಟಿಸಿದ್ದಾರೆ.

 

ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು, ಹೆಚ್ಚಿನ ಮಾಹಿತಿಗೆ 9538732777, 9945785170 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top