ಎಸ್.ಎಸ್.ಎಲ್.ಸಿ ಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ದ್ವಿತೀಯ : ಜಿಲ್ಲಾಧಿಕಾರಿಗಳಿಂದ ಶ್ಲಾಘನೆ

Upayuktha
0

 



ಉಡುಪಿ: 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ  ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ರಾಜ್ಯಕ್ಕೆ ಎರಡನೇ ಸ್ಥಾನವನ್ನು ಪಡೆದಿರುವುದು ಸಂತೋಷದ ವಿಷಯವಾಗಿದೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಮದರ್ ಥೆರೇಸಾ ಮೆಮೋರಿಯಲ್ ಸ್ಕೂಲ್ ಪ್ರೀತಮ್ ಜಿ. ಪೂಜಾರಿ ಅವರು ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆಯುವುದರೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ ಇವರಿಗೆ ಜಿಲ್ಲಾಡಳಿತದ ಪರವಾಗಿ ಹಾಗೂ ವೈಯಕ್ತಿಕವಾಗಿ ಜಿಲ್ಲಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ.


ಜಿಲ್ಲೆಯು ರಾಜ್ಯದಲ್ಲಿ ಎರಡನೇ ಸ್ಥಾನವನ್ನು ಪಡೆಯುವಲ್ಲಿ ವಿದ್ಯಾರ್ಥಿಗಳ ಪರಿಶ್ರಮ, ಪೋಷಕರ ಸಹಕಾರ, ಮುಖ್ಯವಾಗಿ ಇಲ್ಲಿನ ಬೋಧಕರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ವಹಿಸಿರುವ ನಿರ್ಣಾಯಕ ಪಾತ್ರ ಮತ್ತು ಎಲ್ಲಾ ಅಧಿಕಾರಿ ಸಿಬ್ಬಂಧಿಗಳ ಕಾರ್ಯತತ್ಪರತೆ ಶ್ಲಾಘಿಸಿದ್ದಾರೆ.


625 ಕ್ಕೆ 624 ಅಂಕ ಪಡೆದ ವಿದ್ಯಾರ್ಥಿಗಳಾದ ಕುಂದಾಪುರದ ಶ್ರೀ ವೆಂಕಟ್ರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಅನ್ವರ್ಥ್ ಪೂಜಾರಿ, ಕಾರ್ಕಳ ತಾಲೂಕು ಬೈಲೂರು ಸರಕಾರಿ ಜೂನಿಯರ್ ಕಾಲೇಜಿನ ಲಿಸಾ ಬಾರ್ಬೋಝಾ, ಕಾರ್ಕಳ ಕುಕ್ಕುಂದೂರು ಗಣಿತ್ ನಗರದ ಜ್ಞಾನಸುಧಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ವಿದ್ಯಾರ್ಥಿಗಳಾದ ಮಹಾಲಕ್ಷ್ಮಿ ಭಾಗವ್ ಹಾಗೂ ಮಹಾಲಕ್ಷ್ಮಿ ಪೈ ಬಿ, ಕೋಟ ವಿವೇಕ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಚೈತನ್ಯಶ್ರೀ ಆರ್ ಉಡುಪ, 625 ಕ್ಕೆ 623 ಅಂಕ ಪಡೆದ ಕುಂದಾಪುರದ ಶ್ರೀ ವೆಂಕಟ್ರಮಣ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಪ್ರಾರ್ಥನಾ ಜಿ, ಸಾತ್ವಿಕ್ ಎಸ್ ಭಟ್, ಥಕ್ಷಾ ಪಿ. ಶೆಟ್ಟಿ ಹಾಗೂ ಕಾರ್ಕಳ ಕುಕ್ಕುಂದೂರು ಗಣಿತ್ ನಗರದ ಜ್ಞಾನಸುಧಾ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ವೈಷ್ಣವಿ ಶೆಟ್ಟಿಗಾರ್ ಮತ್ತು 625 ಕ್ಕೆ 622 ಅಂಕ ಪಡೆದ ಕೋಟ ವಿವೇಕ ಇಂಗ್ಲೀಷ್ ಮೀಡಿಯಂ ಹೈಸ್ಕೂಲ್ ಸಂಕಲ್ಪ್ ಕುಮಾರ್ ಇವರಿಗೂ ಜಿಲ್ಲಾಡಳಿತದ ಪರವಾಗಿ ಹಾಗೂ ಅಭಿನಂದನೆ ವ್ಯಕ್ತಪಡಿಸಿದ್ದಾರೆ.


ಜಿಲ್ಲೆಯಲ್ಲಿ ಒಟ್ಟು 13,373 ರೆಗ್ಯೂಲರ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 13,129 ವಿದ್ಯಾರ್ಥಿಗಳು ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆಯು ಶೇ. 98.18 ರಷ್ಟು ಫಲಿತಾಂಶ ದಾಖಲಿಸಿದೆ.



ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top