‘ಸರಸ್ವತಿ ಕನ್ನಡ ರತ್ನ’ ರಾಜ್ಯ ಪ್ರಶಸ್ತಿಗೆ ಶ್ರೀಮತಿ ನಾಗಮ್ಮ ಆಯ್ಕೆ

Upayuktha
0

ದಾವಣಗೆರೆ: ಚಿತ್ರದುರ್ಗ ಜಿಲ್ಲೆ ಕುರುಬರಹಳ್ಳಿಯ ಹಿರಿಯ ಜನಪದ ಕಲಾವಿದೆ, ಶ್ರೀಮತಿ ನಾಗಮ್ಮ ಕಳೆದ 50 ವರ್ಷಗಳಿಂದ ನಿರಂತರವಾಗಿ ಸೋಬಾನ ಪದಗಳು, ಭಜನೆ, ತತ್ವ ಪದಗಳನ್ನು ಹಾಡುತ್ತಾ ಕಲೆ ಸಂಸ್ಕೃತಿಯನ್ನು ಉಳಿಸಿ ಬೆಳಸಲು ಪ್ರಯತ್ನಿಸುತ್ತಿದ್ದಾರೆ. ಇದೀಗ ಇವರ ಸಾಧನೆಗಳನ್ನು ಗುರುತಿಸಿ ಸಾಲಿಗ್ರಾಮದ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಕೊಡಮಾಡುವಸರಸ್ವತಿ ಕನ್ನಡ ರತ್ನರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ ಶೆಣೈ ತಿಳಿಸಿದ್ದಾರೆ.

 

ಚಿತ್ರದುರ್ಗ, ಭದ್ರಾವತಿ ಆಕಾಶವಾಣಿಗಳಲ್ಲೂಕಾರ್ಯಕ್ರಮಗಳನ್ನು ನೀಡಿರುವ ಇವರು, ಶರಣ ಸಂಸ್ಕೃತಿ ಉತ್ಸವ, ಶಿವರಾತ್ರಿ ಉತ್ಸವ, ಸಿರಿಗೆರೆ ತರಳಬಾಳು ಹುಣ್ಣಿಮೆ, ಹುಬ್ಬಳ್ಳಿಯ ಸಿದ್ದರೂಢ ಮಠಗಳಲ್ಲೂ ಭಜನಾ ಕಾರ್ಯಕ್ರಮ ನೀಡಿರುತ್ತಾರೆ.

 

ದಾವಣಗೆರೆಯ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಏ. 19, ಭಾನುವಾರ ಸನ್ಮಾನ ಕಾರ್ಯಕ್ರಮ ಏರ್ಪಡಿಸಿರುವುದಾಗಿ ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಸಂಸ್ಥೆಯ ಪದಾಧಿಕಾರಿಗಳು, ಸರ್ವಸದಸ್ಯರು ನಾಗಮ್ಮನವರಿಗೆ ಅಭಿನಂದಿಸಿದ್ದಾರೆ. 

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top