ಯಕ್ಷಧ್ರುವ ಪಟ್ಲ ಫೌಂಡೇಶನಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ

Upayuktha
0



ಮಂಗಳೂರು: ಮೇ 30 ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಪಟ್ಲ ಸಂಭ್ರಮ 2026 ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ (SSLC) ಮತ್ತು ಪಿಯುಸಿ (2nd  PUC) ವಿಭಾಗದಲ್ಲಿ ಶೇಕಡ 90ಕ್ಕಿಂತ ಮೇಲ್ಪಟ್ಟು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುವುದು.


ಈ ಯೋಜನೆಯ ಫಲಾನುಭವಿಗಳು ತಮ್ಮ ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ದಿನಾಂಕ 15 -05 -2026. ವಿದ್ಯಾರ್ಥಿ ವೇತನವನ್ನು ಸ್ವೀಕರಿಸುವ ವಿದ್ಯಾರ್ಥಿಗಳು ಸಮಾರಂಭದಂದು (30-05-2026) ಬೆಳಿಗ್ಗೆ ಗಂಟೆ 9ಕ್ಕೆ ಸರಿಯಾಗಿ ಕಡ್ಡಾಯವಾಗಿ ಹಾಜರಿರಬೇಕು.


ವಿದ್ಯಾರ್ಥಿಗಳು ಸ್ವಯಂ ಬಾರದೇ ಇದ್ದಲ್ಲಿ ಆ ಅರ್ಜಿಯನ್ನು ಮಾನ್ಯ ಮಾಡಲಾಗುವುದಿಲ್ಲ. ದಾಖಲೆಗಳೊಂದಿಗೆ ಅರ್ಜಿಗಳನ್ನು ಕಳುಹಿಸಬೇಕಾದ ವಿಳಾಸ:

ಶಾಪ್ ನಂ. 16. ಮತ್ತು 17

ಸಿಎ ಸುದೇಶ್ ಕುಮಾರ್ ರೈ

ಎರಡನೇ ಮಹಡಿ

ಎಂಪೈರ್ ಮಾಲ್

ಎಂ ಜಿ ರಸ್ತೆ, ಮಂಗಳೂರು 575003

ಸಂಪರ್ಕ ಸಂಖ್ಯೆ 9448623375


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top