ಮುಂಡಾಜೆ: 2025-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 39 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100 ಶೇಕಡಾ ಫಲಿತಾಂಶ ಬಂದಿರುತ್ತದೆ. ಇದರಲ್ಲಿ 13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 24 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಸುಮಂತ್ 571, ಮೋಕ್ಷಿತಾ 563, ಸಹನಾ 544, ಭುವನ್ 530, ಚರಣ್ 527, ರಕ್ಷಿತ್ ನಾಯ್ಕ 524, ವಿದ್ಯಾ 521, ಹೊಂಗಿರಣ 512, ಶ್ರವಣ್ 512, ಮೋಕ್ಷಿತಾ 511, ಅನುಪ್ರಿಯಾ 510, ಪುಷ್ಪರಾಜ 510, ಭೂಮಿಕಾ 510 ಅಂಕವನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ 33 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 3 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 25 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ.
ಕಲಾ ವಿಭಾಗದಲ್ಲಿ ಜನಾರ್ಧನ ನಾಯ್ಕ 551, ಜಲಜಾಕ್ಷಿ 536, ಯತೀಶ 527 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

