ನಾಳೆ ವಿಚಾರಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ

Upayuktha
0

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಯಕ್ಷಗಾನ ಕೇಂದ್ರ ಹಾಗೂ ಎಂಜಿಎಂ ಸಂಧ್ಯಾ ಕಾಲೇಜು ಮಣಿಪಾಲ ಇವರ ಸಹಯೋಗದಲ್ಲಿ ಏಪ್ರಿಲ್ 08 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಯಕ್ಷಗಾನ ಮತ್ತುಕಾರಂತರು ವಿಚಾರ ಗೋಷ್ಠಿ ಹಾಗೂ ಅಳವು ಅರಿಯದ ಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.


ಕಾರ್ಯಕ್ರಮವನ್ನು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ ಎಂ ಎಲ್ ಸಾಮಗ ಉದ್ಘಾಟಿಸಲಿದ್ದು, ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಗಣನಾಥ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಯಮಿ ಶಿಕ್ಷಣ ತಜ್ಞ  ಹರಿಪ್ರಸಾದ್‍ ರೈ ಪುಸ್ತಕವನ್ನು ಬಿಡುಗಡೆಗೊಳಿಸಲಿದ್ದಾರೆ. ತುಮಕೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ನಿತ್ಯಾನಂದ ಬಿ ಶೆಟ್ಟಿ "ಯಕ್ಷಗಾನ ಕಲಾಮೀಮಾಂಸೆ ಮತ್ತು ಅಧ್ಯಯನ ಕಾರಂತರ ದೃಷ್ಟಿಕೋನ" ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. 


ಮಂಗಳೂರು ವಿಶ್ವ ವಿದ್ಯಾನಿಲಯ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಾರಾಮ ತೋಳ್ಪಾಡಿ, ಮಣಿಪಾಲ ಮಾಹೆಯ ನಿವೃತ್ತ ಪ್ರಾಧ್ಯಾಪಕ ಮತ್ತು ಚಿಂತಕ ಪ್ರೊ.ಕೆ.ಫಣಿರಾಜ್ ಹಾಗೂ ಮಂಗಳೂರಿನ ಬಲ್ಮಠ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರೊ.ರಾಮದಾಸ ಪ್ರಭು ಪುಸ್ತಕ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top