ಬಂಟ್ವಾಳದಲ್ಲಿ ‘ಸೇವಾ ಸಂಭ್ರಮ’: ಏ.25ರಂದು ಬಿಲ್ಲವ ಬ್ರಿಗೇಡ್‌ನಿಂದ ಮನೆ ಹಸ್ತಾಂತರ ಹಾಗೂ ಸ್ಟಾರ್ ನೈಟ್

Upayuktha
0

ಎಐ ನಿರ್ಮಿತ ಸಾಂಕೇತಿಕ ಚಿತ್ರ


ಬಂಟ್ವಾಳ, ಏಪ್ರಿಲ್ 21: “ದೀನರ ಸೇವೆಯೇ ದೇವರ ಸೇವೆ” ಎಂಬ ಧ್ಯೇಯವಾಕ್ಯದೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಮಂಗಳೂರಿನ ಬಿಲ್ಲವ ಬ್ರಿಗೇಡ್ ಮತ್ತು ನಂದಾದೀಪ ಫೌಂಡೇಶನ್ ಸಂಸ್ಥೆಗಳು ಬಂಟ್ವಾಳದಲ್ಲಿ ಭಾರೀ ಮಟ್ಟದ ‘ಸೇವಾ ಸಂಭ್ರಮ’ ಕಾರ್ಯಕ್ರಮವನ್ನು ಏಪ್ರಿಲ್ 25ರಂದು ಆಯೋಜಿಸಿವೆ.


ಬ್ರಹ್ಮರಕೂಟ್ಲು ಟೋಲ್‌ಗೇಟ್ ಸಮೀಪದ ಪಂಬದಬೆಟ್ಟು ಕ್ರೀಡಾಂಗಣದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ, ತಾಲೂಕಿನ ಕಲ್ಲಿಗೆ ಗ್ರಾಮದ ಕುಪ್ಪಿಲ ಹಾಗೂ ಸಜೀಪ ಗ್ರಾಮದ ತಲೆಮಗುರು ಪ್ರದೇಶಗಳ ಎರಡು ಬಡ ಕುಟುಂಬಗಳಿಗೆ ಹೊಸ ಮನೆಗಳನ್ನು ಹಸ್ತಾಂತರಿಸಲಾಗುತ್ತದೆ.


ಶಿಕ್ಷಣ, ಆರೋಗ್ಯ ಮತ್ತು ಆಶ್ರಯ ಎಂಬ ಉದ್ದೇಶಗಳೊಂದಿಗೆ ಕಳೆದ ಮೂರು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವ ಈ ಸಂಸ್ಥೆಗಳು ಬಂಟ್ವಾಳ ತಾಲೂಕು ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಲ್ಲಿ 15 ಮನೆಗಳನ್ನು ನಿರ್ಮಿಸಿ, ಸುಮಾರು 25 ಮನೆಗಳನ್ನು ದುರಸ್ತಿಗೊಳಿಸಿ ಬಡ ಕುಟುಂಬಗಳಿಗೆ ನೆರವಾಗಿವೆ.


ಸುಮಾರು 10,000 ಸದಸ್ಯರನ್ನು ಹೊಂದಿರುವ ಬಿಲ್ಲವ ಬ್ರಿಗೇಡ್, ಕೋವಿಡ್ ಮಹಾಮಾರಿ ಸಮಯದಲ್ಲಿ 4,500ಕ್ಕೂ ಹೆಚ್ಚು ಆಹಾರ ಕಿಟ್‌ಗಳನ್ನು ವಿತರಿಸಿದ್ದು, ರಕ್ತದ ಕೊರತೆ ಎದುರಾದ ಸಂದರ್ಭದಲ್ಲಿ ದಿನಕ್ಕೆ 100 ರಿಂದ 150 ಯುನಿಟ್‌ಗಳಷ್ಟು ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆ ಸಲ್ಲಿಸಿದೆ. ಜೊತೆಗೆ ಅನೇಕ ವಿದ್ಯಾರ್ಥಿಗಳಿಗೆ ಶಿಕ್ಷಣ ಸಹಾಯ ಹಾಗೂ ಅನಾರೋಗ್ಯ ಪೀಡಿತರಿಗೆ ಆರೋಗ್ಯ ನೆರವು ನೀಡಲಾಗಿದೆ.


ಸಂಸ್ಥೆಯ ಈ ಸೇವಾ ಚಟುವಟಿಕೆಗಳನ್ನು ಪರಿಗಣಿಸಿ ಕರ್ನಾಟಕ ಸರ್ಕಾರವು 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರದಾನಿಸಿದೆ.


ಕಾರ್ಯಕ್ರಮದ ಅಂಗವಾಗಿ ಖ್ಯಾತ ಸಿನೆಮಾ ತಾರೆಯರು ಮತ್ತು ಗಾಯಕ-ಗಾಯಕಿಯರೊಂದಿಗೆ ಮ್ಯೂಸಿಕಲ್ ಸ್ಟಾರ್ ನೈಟ್ ಕೂಡ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.


ಈ ಕುರಿತು ಬಿಲ್ಲವ ಬ್ರಿಗೇಡ್ ಕಲ್ಲಡ್ಕ ವಲಯದ ತೋಟ ಕೃಷ್ಣಪ್ಪ ಪೂಜಾರಿ ಅವರು ಮಾಹಿತಿ ನೀಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top