ನಾಳೆ ಹುನಗುಂದದಲ್ಲಿ ಶರಣ ಸಾಹಿತ್ಯ ಕಾರ್ಯಕ್ರಮ

Upayuktha
0


ಹುನಗುಂದ: ನಗರದ ಪುರಸಭೆ ಮಂಗಳ ಭವನದಲ್ಲಿ ಏ.18ರಂದು ಬೆಳಗ್ಗೆ 11 ಗಂಟೆಗೆ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಹಾಗೂ ಕರ್ನಾಟಕ ಲೇಖಕಿಯರ ಸಂಘ ಜಿಲ್ಲಾ ಶಾಖೆ (ಬಾಗಲಕೋಟೆ) ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಕವಿಗೋಷ್ಠಿ, ಬಸವ ಜಯಂತ್ಯುತ್ಸವ ಹಾಗೂ ಲಿಂ. ಉಮಾದೇವಿ, ಪ್ರೊ. ಕೆ. ತಾರಾನಾಥ ಶರಣ ದಂಪತಿ 11ನೇ ಪುಣ್ಯಸ್ಮರಣೆ ಅಂಗವಾಗಿ ಮನೆ ಮನಗಳಿಗೆ ವಚನ ಸೌರಭ ಕಾರ್ಯಕ್ರಮ ನಡೆಯಲಿದೆ.


ಚಿತ್ತರಗಿ ವಿಜಯಮಹಾಂತೇಶ್ವರ ಸಂಸ್ಥಾನಮಠದ ಗುರು ಮಹಾಂತ ಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎ.ಎಸ್‌. ಪಾವಟಿ ಹಾಗೂ ಇಳಕಲ್ ಎಸ್.ವಿ.ಎಂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ಪ್ರೊ. ಎಸ್.ಕೆ. ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಪ್ರೊ. ಡಾ. ಎಂ.ಬಿ. ಒಂಟಿ ಅವರು ದತ್ತಿ ಉಪನ್ಯಾಸ ನೀಡಲಿದ್ದು, ಪ್ರೊ. ಕೆ. ತಾರಾನಾಥ ಅವರ ಬದುಕು, ಬರಹ ಮತ್ತು ಶರಣ ಚಿಂತನೆಗಳ ಕುರಿತು ಬೆಳಕು ಚೆಲ್ಲಲಿದ್ದಾರೆ. ಪುರಸಭೆ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ ಸೇರಿ ಗಣ್ಯರು ಉಪಸ್ಥಿತರಿರುವರು ಎಂದು ಪರಿಷತ್ತಿನ ಅಧ್ಯಕ್ಷ ಎಸ್.ಎನ್. ಹಾದಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top