ಮಂಗಳೂರು: ಶಿಕ್ಷಣದಲ್ಲಿ ಕಲೆಗಳು ಕೇವಲ ಒಂದು ವಿಷಯವಲ್ಲ, ಬದಲಿಗೆ ಕಲಿಕೆಯ ಅನುಭವಗಳನ್ನು ಶ್ರೀಮಂತಗೊಳಿಸುವ ಸಾಧನವಾಗಿದೆ ಎಂದು ಶಾರದಾ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ ಬಿ ಪುರಾಣಿಕ್ ನುಡಿದರು.
ಅವರು ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಾಯಿಗದಲ್ಲಿ ಹಮ್ಮಿಕೊಂಡಿರುವ ಭರತನಾಟ್ಯದ ವಿದ್ವತ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಾರದಾ ವಿದ್ಯಾಲಯದಲ್ಲಿ ಆಯೋಜಿಸಿದ ಒಂದು ದಿನದ ಭಾವಗಳ ಭಾಷೆ ರಸೋತ್ಪತ್ತಿ ಮತ್ತು ನಾಯಿಕ ನಾಯಕ ಎಂಬ ವಿಷಯದಲ್ಲಿ ವಿಶೇಷ ನೃತ್ಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತಾಡಿದರು.
ನೃತ್ಯ ಕಲಾವಿದ ಮಕ್ಕಳಿಗೆ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ನ ಕಾರ್ಯ ಅಭಿನಂದನೀಯ ಎಂದರು.
ಪರಿಷತ್ ಅಧ್ಯಕ್ಷರಾದ ವಿದುಷಿ ರಾಜಶ್ರೀ ಉಳ್ಳಾಲ್ ಪ್ರಸ್ತುತ ಪರಿಷತ್ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಉಪಾಧ್ಯಕ್ಷ ವಿದ್ವಾನ್ ಚಂದ್ರಶೇಖರ ನಾವಡ, ಕಾರ್ಯದರ್ಶಿ ವಿದುಷಿ ಶಾರದಾಮಣಿ ಶೇಖರ್, ನಿಕಟಪೂರ್ವ ಅಧ್ಯಕ್ಷ ವಿದ್ವಾನ್ ಯು.ಕೆ ಪ್ರವೀಣ್, ಕೋಶಾಧಿಕಾರಿ ವಿದ್ವಾನ್ ಸುರೇಶ್ ಅತ್ತಾವರ್, ಮೊದಲಾದವರು ಉಪಸ್ಥಿತರಿದ್ದರು.
ಗುರು ಶ್ರೀಧರ ಹೊಳ್ಳ ಸ್ವಾಗತಿಸಿ ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶಿರಸಿಯ ಪ್ರಸಿದ್ಧ ನೃತ್ಯ ಕಲಾವಿದೆ ಡಾ. ಸಹನಾ ಭಟ್ ಕಾರ್ಯಾಗಾರ ನಡೆಸಿಕೊಟ್ಟರು. ಮಂಗಳೂರಿನ ಸುಮಾರು 130ಕ್ಕೂ ನೃತ್ಯ ಕಲಾವಿದರು ಭಾಗವಹಿಸಿದ್ದರು. ನಗರದ ಅನೇಕ ಭರತನಾಟ್ಯ ಗುರುಗಳು ಸಹ ಭಾಗವಹಿಸಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

