ಸಾಗರದಲ್ಲಿ ಆಸ್ತಿ ತೆರಿಗೆ ಪಾವತಿದಾರರಿಗೆ ವಿಶೇಷ ಸೌಲಭ್ಯಗಳು

Upayuktha
0


ಸಾಗರ: 2026–27ನೇ ಸಾಲಿನ ಆಸ್ತಿ ತೆರಿಗೆ ಪಾವತಿಸಲು ಆಗಮಿಸುವ ನಾಗರಿಕರ ಅನುಕೂಲಕ್ಕಾಗಿ ಸಾಗರ ನಗರಸಭೆಯ ವತಿಯಿಂದ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.


ನಗರಸಭೆ ಆವರಣದಲ್ಲಿ ತೆರಿಗೆ ಪಾವತಿಗೆ ಬರುವವರಿಗೆ ಕುಳಿತುಕೊಳ್ಳಲು ಆಸನ ವ್ಯವಸ್ಥೆ, ನೆರಳಿಗಾಗಿ ಶಾಮಿಯಾನ, ಬಾಯಾರಿಕೆಗೆ ಶುದ್ಧ ಕುಡಿಯುವ ನೀರು ಹಾಗೂ ಕಾಫಿ–ಟೀ ವ್ಯವಸ್ಥೆ ಮಾಡಲಾಗಿದೆ. ಇದರಿಂದ ನಾಗರಿಕರು ಸುಗಮವಾಗಿ ಹಾಗೂ ಆರಾಮವಾಗಿ ತೆರಿಗೆ ಪಾವತಿಸಲು ಸಾಧ್ಯವಾಗುತ್ತಿದೆ.


ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಾಳೆಯಿಂದ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ಆರಂಭಿಸಲಾಗುತ್ತದೆ. ಜೊತೆಗೆ, ತೆರಿಗೆ ಪಾವತಿಯನ್ನು ಇನ್ನಷ್ಟು ಸುಲಭಗೊಳಿಸಲು ನಗರಸಭೆಯ ಆವರಣದಲ್ಲಿಯೇ ಬ್ಯಾಂಕಿನ ಕೌಂಟರ್‌ನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ.


ನಗರಸಭೆಯ ಈ ಜನಪರ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಆಯುಕ್ತರು ಹಾಗೂ ಕಂದಾಯ ಅಧಿಕಾರಿಗಳಿಗೆ ಅಭಿನಂದನೆಗಳು ವ್ಯಕ್ತವಾಗಿವೆ.


ಈ ವ್ಯವಸ್ಥೆ ಕಲ್ಪಿಸಲು ಪ್ರಭಾವ ಬೀರಿದ ಹಿರಿಯ ನಾಗರಿಕರಾದ ಅಶೋಕ ಕುಮಾರ್ ಅವರನ್ನು ವಿಜಯನಗರದ ಜಿ.ಟಿ. ಶ್ರೀಧರ ಶರ್ಮಾ ಅವರು ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top