ಕ್ರೀಡೆ ದೇಹ–ಮನಸ್ಸಿನ ಆರೋಗ್ಯಕ್ಕೆ ಅವಶ್ಯ: ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು

Upayuktha
0

ಅಂತರ್‌ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಚಾಲನೆ




ಉಡುಪಿ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಪೂರ್ಣಪ್ರಜ್ಞ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಎರಡು ದಿನಗಳ ಅಂತರ್‌ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಗುರುವಾರ ಚಾಲನೆ ನೀಡಲಾಯಿತು.


ಶ್ರೀ ಅದಮಾರು ಮಠದ ಹಿರಿಯ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಆಶೀರ್ವಚನ ನೀಡಿ, ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡಲು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅತ್ಯಗತ್ಯ ಎಂದು ಹೇಳಿದರು. ಕಬಡ್ಡಿ ಆಟ ಯುವಜನರಲ್ಲಿ ದೇಶಭಕ್ತಿ ಮತ್ತು ರಕ್ಷಣಾ ಮನೋಭಾವ ಬೆಳೆಸಲಿ ಎಂದು ಆಶಿಸಿದರು.


ಉಡುಪಿ ಶ್ರೀ ಅದಮಾರು ಮಠ ಎಜುಕೇಶನಲ್‌ ಕೌನ್ಸಿಲ್‌ ಅಧ್ಯಕ್ಷ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪಂದ್ಯಾವಳಿಯನ್ನು ಉದ್ಘಾಟಿಸಿ, ಕ್ರೀಡೆಯನ್ನು ಕೇವಲ ಸ್ಪರ್ಧೆಯಾಗಿ ಅಲ್ಲದೆ ಮನೋರಂಜನೆ ಮತ್ತು ಆರೋಗ್ಯದ ದೃಷ್ಟಿಯಿಂದಲೂ ಕಾಣಬೇಕು ಎಂದರು. ಸೋಲು–ಗೆಲುವು ಸಹಜವಾದರೂ ಪ್ರಾಮಾಣಿಕ ಪ್ರಯತ್ನವೇ ಪ್ರಮುಖ ಎಂದು ತಿಳಿಸಿದರು.


ಸಂಸದ ಕೋಟ ಶ್ರೀನಿವಾಸ ಪೂಜಾರಿ ಕ್ರೀಡಾಳುಗಳಿಗೆ ಶುಭ ಹಾರೈಸಿದರು. ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌. ಭೋಜೇಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳು ಶಿಕ್ಷಣ ಪಡೆದು ಸಮಾಜದ ಬೆಳವಣಿಗೆಗೆ ಮುನ್ನಡೆ ನೀಡಬೇಕು ಎಂದರು. ಮಂಗಳೂರು ವಿ.ವಿ.ಯಿಂದ ಅನುದಾನ ದೊರೆಯದಿರುವುದನ್ನು ಅವರು ವಿಷಾದಿಸಿದರು.


ಯುಎಸ್‌ಎಎಂಇಸಿ ಕಾರ್ಯದರ್ಶಿ ಡಾ| ಎ.ಪಿ. ಭಟ್‌ ಶಿಕ್ಷಣದಲ್ಲಿ ಶಿಸ್ತು ಮತ್ತು ಗುಣಮಟ್ಟದ ಅಗತ್ಯತೆ ಕುರಿತು ಮಾತನಾಡಿದರು. ಪಿಸಿಎಂಸಿ ಕಾರ್ಯದರ್ಶಿ ಡಾ| ಜಿ.ಎಸ್‌. ಚಂದ್ರಶೇಖರ್‌ ವಿದ್ಯಾರ್ಥಿಗಳಿಗೆ ಪದವಿಯೊಂದಿಗೆ ಕೌಶಲಾಭಿವೃದ್ಧಿ ಅಗತ್ಯ ಎಂದು ಹೇಳಿದರು.


ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕ ಡಾ| ಜೆರಾಲ್ಡ್‌ ಸಂತೋಷ್‌ ಡಿ’ಸೋಜಾ ಉತ್ತಮ ಆಟಗಾರ್ತಿಯರಿಗೆ ವಿಶ್ವವಿದ್ಯಾನಿಲಯದಿಂದ ಅವಕಾಶ ಸಿಗುತ್ತದೆ ಎಂದು ತಿಳಿಸಿದರು. ಪಿಪಿಸಿ (ಸ್ವಾಯತ್ತ) ಪ್ರಾಂಶುಪಾಲ ಡಾ| ರಾಮು ಎಲ್‌. ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಪ್ರತಿಭೆಗಳನ್ನು ಬೆಳೆಸಲು ಪ್ರಯತ್ನಿಸುತ್ತಿದ್ದೇವೆ ಎಂದರು.


ಈ ಸಂದರ್ಭದಲ್ಲಿ ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ಸಹ ನಿರ್ದೇಶಕ ಡಾ| ರಮೇಶ್‌, ಪಿಸಿಎಂಸಿ ಕೋಶಾಧಿಕಾರಿ ಸಿಎ ಪ್ರಶಾಂತ್‌ ಹೊಳ್ಳ, ಪಿಪಿಸಿ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಉಪನ್ಯಾಸಕರಾದ ಡಾ| ರಮೇಶ್‌ ಪಿ.ಎಸ್‌. ಸ್ವಾಗತಿಸಿ, ಮುರಳಿ ನಿರೂಪಿಸಿದರು. ಜಯಲಕ್ಷ್ಮೀ ವಂದಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ 33 ಕಾಲೇಜುಗಳ ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top