ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರಿಗೆ ಮೆರವಣಿಗೆಯ ಸ್ವಾಗತ

Upayuktha
0


 

ಉಡುಪಿ: ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಉತ್ತರಾದಿ ಮಠದ ಪಟ್ಟದ ದೇವರಾದ ಶ್ರೀ ಮೂಲ ರಾಮ ದೇವರ ಸಮೇತ ಪೀಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರು ಶ್ರೀ ಕೃಷ್ಣ ಮಠಕ್ಕೆ ಮೆರವಣಿಗೆಯ ಮೂಲಕ ಪರ್ಯಾಯ ಶೀರೂರು ಮಠದ ವತಿಯಿಂದ ಸ್ವಾಗತಿಸಲಾಯಿತು.


ಸಂಸ್ಕೃತ ಕಾಲೇಜಿನಿಂದ ಮೆರವಣಿಗೆಯ ಮೂಲಕ ಶ್ರೀಪಾದರನ್ನು ಸ್ವಾಗತಿಸಿ ನಂತರ ಕನಕನ ಕಿಂಡಿಯಲ್ಲಿ ದೇವರ ದರ್ಶನ ಮಾಡಿದರು. ಕೃಷ್ಣ ಮಠದ ಮುಂಭಾಗದಲ್ಲಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಉತ್ತರಾದಿ ಮಠದ ಶ್ರೀ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದರನ್ನು ಸ್ವಾಗತಿಸಿದರು ಹಾಗೂ ದೇವರ ದರ್ಶನ ಮಾಡಿಸಿದರು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು. ಹಾಗೂ ಶೀರೂರು ಮಠದ ಶಿಷ್ಯವರ್ಗದವರು ಹಾಗೂ ಉತ್ತರಾದಿ ಮಠದ ಶಿಷ್ಯವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top