ಶ್ರೀ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಅಂಬಿಕಾ ಸಂಸ್ಥೆಗಳಿಗೆ ಭೇಟಿ

Upayuktha
0

 ರಜತ ಮಹೋತ್ಸವ ಸಮಾರೋಪ ಹಾಗೂ ನೂತನ ಆಪ್ ಲೋಕಾರ್ಪಣೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ಇದೀಗ ಇಪ್ಪತ್ತೈದು ವರ್ಷಗಳು ತುಂಬಿವೆ. ಎರಡೂವರೆ ದಶಕಗಳ ಹಿಂದೆಅಂಬಿಕಾ ವಿದ್ಯಾಲಯಎಂಬ ಅಭಿದಾನದೊಂದಿಗೆ ಕೋಚಿಂಗ್ ಸೆಂಟರ್ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಅಡಿಯಿರಿಸಿದ್ದಅಂಬಿಕಾಇದೀಗ ತನ್ನ ಸಾರ್ಥಕ ಇಪ್ಪತ್ತೈದು ವರ್ಷಗಳ ಶಿಕ್ಷಣ ಯಾನವನ್ನು ಪೂರೈಸಿದೆ.

 


ವರ್ಷಪೂರ್ತಿ ನಾನಾ ಬಗೆಯ ಕಾರ್ಯಕ್ರಮ

 

ಧಾರ್ಮಿಕ ಚಿಂತನೆ, ಶೈಕ್ಷಣಿಕ ಸಾಧನೆ ಮತ್ತು ರಾಷ್ಟ್ರಭಕ್ತಿ ಉದ್ದೀಪನಗೊಳಿಸುವ ಸಮಗ್ರ ಶಿಕ್ಷಣವನ್ನು ಜಾರಿಗೊಳಿಸಿರುವ ಅಂಬಿಕಾ ಶಿಕ್ಷಣ ಸಂಸ್ಥೆಗಳು ಇದೀಗ ಇಪ್ಪತ್ತೈದು ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿವೆ. ಪ್ರಯುಕ್ತ ವರ್ಷಪೂರ್ತಿ ನಾನಾ ಬಗೆಯ ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪದ್ಮಭೂಷಣ ಡಾ.ಉನ್ನಿಕೃಷ್ಣನ್ ಹಾಗೂ ಅವರ ಪುತ್ರಿ ಉತ್ತರಾ ಉನ್ನಿಕೃಷ್ಣನ್ ಅವರಿಂದ ಸಂಗೀತ ಕಾರ್ಯಕ್ರಮ, ಪರಮವೀರಚಕ್ರ ಭೂಷಿತ ಕ್ಯಾಪ್ಟನ್ ಸಂಜಯ್ ಕುಮಾರ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಹೀಗೆ ಹತ್ತು ಹಲವು ದಾಖಲಾರ್ಹ ಕಾರ್ಯಕ್ರಮಗಳು ಜರಗಿವೆ. ಎಲ್ಲಾ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಮೇ 7ರಂದು ಬಪ್ಪಳಿಗೆಯ ಅಂಬಿಕಾ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ.

 

ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಭೇಟಿ

 

ಶೃಂಗೇರಿ ಉಭಯ ಜಗದ್ಗುರುಗಳ ಕೃಪಾಶೀರ್ವಾದ ಅಂಬಿಕಾ ಸಂಸ್ಥೆಗಳ ಬೆಳವಣಿಗೆಯ ಹಿಂದಿರುವ ಮಹಾನ್ ಶಕ್ತಿ. ಇದೀಗ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಸಮಾರೋಪಕ್ಕೆ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಗಮಿಸುತ್ತಿದ್ದು, ಮೇ 7ರಂದು ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಸಮಾರಂಭ ನಡೆಯಲಿದ್ದು ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಆಶೀರ್ವಚನ ನೀಡಲಿದ್ದಾರೆ.

 

ಮೇ6ರಂದು ಶ್ರೀ ಗುರುಗಳ ಆಗಮನ, ಶ್ರೀ ಚಂದ್ರಮೌಳೀಶ್ವರ ಪೂಜೆ

 

ಮೇ 6ರಂದು ಸಂಜೆ ಶ್ರೀ ಗುರುಗಳು ಆಗಮಿಸಲಿದ್ದು, ಅಂಬಿಕಾ ಪರಿವಾರದ ವತಿಯಿಂದ ಪೂರ್ಣಕುಂಭ ಸ್ವಾಗತ, ಧೂಳೀ ಪಾದಪೂಜೆ ನಡೆಯಲಿದೆ. ತದನಂತರ ರಾತ್ರಿ ಸುಮಾರು 8 ಗಂಟೆಯಿಂದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಂದ ಶ್ರೀ ಶಂಕರ ಸಭಾಭವನದಲ್ಲಿ ಶ್ರೀ ಚಂದ್ರಮೌಳೀಶ್ವರ ಪೂಜೆ ನಡೆಯಲಿದೆ.

 

ನೂತನ ಆಪ್ ಅನಾವರಣ:

 

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವದ ಸವಿನೆನಪಿಗಾಗಿ ವಿನೂತನ ಮೊಬೈಲ್ ಆಪ್ ಒಂದನ್ನು ಸಮಾಜಕ್ಕೆ ಸಮರ್ಪಿಸಲಾಗುತ್ತಿದೆ. ಮಹಾನಗರಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಓಲಾ, ಉಬರ್ ಮೊದಲಾದ ಬಾಡಿಗೆ ವಾಹನ ಸಂಬಂಧಿ ವ್ಯವಸ್ಥೆಯ ಮಾದರಿಯಲ್ಲಿ ಪುತ್ತೂರಿನ ಜನರಿಗೆ ಬಾಡಿಗೆ ಅಟೋ ರಿಕ್ಷಾಗಳನ್ನು ನಿಗದಿಪಡಿಸುವುದಕ್ಕೆ ಅನುವು ಮಾಡಿಕೊಡುವಂತಹ ಆಪ್ ಅನ್ನು ಅಂಬಿಕಾದ ವತಿಯಿಂದ ರೂಪಿಸಲಾಗಿದೆ. ‘ಹಿಂದೂ ಸಂಪರ್ಕ ಸಾರಿಗೆಎಂಬ ಹೆಸರಿನಲ್ಲಿ ಆಪ್ ಅನ್ನು ರೂಪಿಸಲಾಗಿದ್ದು, ಪುತ್ತೂರಿಗರಿಗೆ ಅಟೋ ರಿಕ್ಷಾಗಳನ್ನು ಬಾಡಿಗೆಗೆ ಪಡೆಯುವುದಕ್ಕೆ ಇದು ಅವಕಾಶ ಮಾಡಿಕೊಡಲಿದೆ. ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರು ಆಪ್ ಅನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

 

ಪತ್ರಿಕಾ ಗೋಷ್ಠಿಯಲ್ಲಿ ಸುಬ್ರಮಣ್ಯ ನಟ್ಟೋಜ, ಅಧ್ಯಕ್ಷರು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ರಾಜಶ್ರೀ ಎಸ್. ನಟ್ಟೋಜ, ಕಾರ್ಯದರ್ಶಿಗಳು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಗಣೇಶ ಪ್ರಸಾದ್ ., ಆಡಳಿತಾಧಿಕಾರಿಗಳು, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ರಾಕೇಶ ಕುಮಾರ್ ಕಮ್ಮಜೆ, ಸಾರ್ವಜನಿಕ ಸಂಪರ್ಕಾಧಿಕಾರಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಉಪಸ್ಥಿತರಿದ್ದು ಮಾಹಿತಿ ನೀಡಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top