ಶ್ರೀನಿವಾಸ ವಿವಿ- ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ, ವಾರ್ಷಿಕೋತ್ಸವ

Upayuktha
0


ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಮತ್ತು ವಾರ್ಷಿಕೋತ್ಸವ ಸಮಾರಂಭ ಮಾರ್ಚ್ 31 ರಂದು ಮುಕ್ಕ ಕ್ಯಾಂಪಸ್ ನಲ್ಲಿ ನಡೆಯಿತು.


ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ. ಎ. ಶ್ರೀನಿವಾಸ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀನಿವಾಸ ವಿಶ್ವವಿದ್ಯಾಲಯದ ಸಂಸ್ಥಾಪಕ ಕುಲಾಧಿಪತಿಗಳಾದ ಡಾ. ಸಿ.ಎ. ಎ. ರಾಘವೇಂದ್ರ ರಾವ್ ರವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಕಠಿಣ ಪರಿಶ್ರಮವನ್ನು ಸ್ಮರಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯವು, ಕೈಗಾರಿಕಾ ಕ್ಷೇತ್ರಗಳ ಅಗತ್ಯಗಳಿಗೆ ಅನುಗುಣವಾಗಿ ಹಾಗೂ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ಅನುಗುಣವಾಗಿ ನವೀನ ಮತ್ತು ಪ್ರಗತಿಪರ ಪಠ್ಯಕ್ರಮವನ್ನು ಒದಗಿಸುತ್ತಿದೆ. ನೂರಕ್ಕೂ ಹೆಚ್ಚು ಪೇಟೆಂಟ್‌ಗಳು ಮತ್ತು ಪ್ರಖ್ಯಾತ ಅಂತರರಾಷ್ಟ್ರೀಯ ಜರ್ನಲ್‌ಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ ವಿಶ್ವವಿದ್ಯಾಲಯದ ಉಪನ್ಯಾಸಕರ ಸಾಧನೆಯನ್ನು ಹೊಗಳಿದರು. ಜಗತ್ತು ಹಾಗೂ ತಂತ್ರಜ್ಞಾನ ವೇಗವಾಗಿ ಬದಲಾಗುತ್ತಿರುವ ಈ ಕಾಲಘಟ್ಟದಲ್ಲಿ, ಬಹು ಕೌಶಲ್ಯ ಮತ್ತು ಬಹು ಪ್ರತಿಭೆಗಳನ್ನು ಹೊಂದಿದವರು ಮಾತ್ರವೇ ಮುಂದುವರಿಯಲು ಸಾಧ್ಯವೆಂದು ಅವರು ಹೇಳಿದರು.


ಮುಖ್ಯ ಅತಿಥಿ ನವ ಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್. ಶಾಂತಿರವರು ಮಾತನಾಡಿ, ಶ್ರೀನಿವಾಸ ವಿಶ್ವವಿದ್ಯಾಲಯವು ಸಾವಿರಾರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿದೆ ಎಂದು ಅವರು ಹೇಳಿದರು. ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಸದಾ ಸರಿಯಾದ ಮಾರ್ಗದಲ್ಲಿ ನಡೆಸುವ ಮಾರ್ಗದರ್ಶಕರು. ಜೀವನದಲ್ಲಿರುವ ಎಲ್ಲವನ್ನೂ ಹಣದಿಂದ ಖರೀದಿಸಲು ಸಾಧ್ಯವಿಲ್ಲ ಎಂಬ ಸತ್ಯವನ್ನು ಅವರು ಒತ್ತಿಹೇಳಿದರು. ಮಾನವ ಮನಸ್ಸೇ ಅತ್ಯಂತ ಪ್ರಮುಖ ಮೂಲಸೌಕರ್ಯವಾಗಿದ್ದು, ಶ್ರೀನಿವಾಸ ವಿಶ್ವವಿದ್ಯಾಲಯದಂತಹ ಪ್ರಖ್ಯಾತ ವಿದ್ಯಾಸಂಸ್ಥೆಗಳು ಯುವ ಮನಸ್ಸುಗಳನ್ನು ಸನ್ಮಾರ್ಗದಲ್ಲಿ ರೂಪಿಸಿ ರಾಷ್ಟ್ರ ನಿರ್ಮಾಣಕ್ಕೆ ಮಹತ್ತರ ಕೊಡುಗೆಯನ್ನು ನೀಡುತ್ತಿವೆ. 2030ರ ವೇಳೆಗೆ ಭಾರತವು ವಿಶ್ವದ ಅತ್ಯಂತ ಯುವ ಆರ್ಥಿಕತೆಯಾಗಲಿದೆ ಎಂದು ಹೇಳಿದರು.


ಶ್ರೀನಿವಾಸ ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ. ಎ. ರಾಮಕೃಷ್ಣ ಶಬರಾಯರವರು, ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಅಡ್ಕ ಶಾಮ ರಾವ್, ಇಂದಿರಮ್ಮ ಮತ್ತು ಡಾ. ಸಿಎ. ಎ. ರಾಘವೇಂದ್ರ ರಾವ್ ರವರಿಗೆ ಗೌರವಪೂರ್ವಕ ನಮನವನ್ನು ಸಲ್ಲಿಸಿದರು, ಹಾಗೂ ಅವರ ಜೀವನ ಮತ್ತು ಸಾಧನೆಯ ಕಿರುಚಿತ್ರಣವನ್ನು ಸಂಕ್ಷಿಪ್ತವಾಗಿ ವಿವರಿಸಿದರು. ಇದೇ ಸಂದರ್ಭದಲ್ಲಿ, ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ, ಕಡಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಪಪ್ರಾಂಶುಪಾಲರಾದ ಡಾ. ವೇದಾವತಿ ಬಿ. ಮತ್ತು ಮಂಗಳೂರಿನ ಶ್ರೀ ರಾಮಾಶ್ರಮ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರು ಹಾಗೂ ಆಡಳಿತಾಧಿಕಾರಿಯಾದ ರಾಜೇಶ್ ಕದ್ರಿ ಯವರನ್ನು 2026 ನೇ ಸಾಲಿನ ಎ. ಶಾಮ ರಾವ್ ಸ್ಮಾರಕ "ಸಾಧನಾ ಶ್ರೀ" ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಈ ಸಂದರ್ಭದಲ್ಲಿ, ಪೇಟೆಂಟ್‌ಗಳನ್ನು ಪಡೆದ ಮತ್ತು ಪ್ರಖ್ಯಾತ ಅಂತರರಾಷ್ಟ್ರೀಯ ಜರ್ನಲ್‌ಗಳಲ್ಲಿ ಸಂಶೋಧನಾ ಪ್ರಬಂಧಗಳನ್ನು ಪ್ರಕಟಿಸಿದ ಉಪನ್ಯಾಸಕರನ್ನು ವೇದಿಕೆಗೆ ಆಹ್ವಾನಿಸಿ ಗೌರವಿಸಲಾಯಿತು. ಶೈಕ್ಷಣಿಕ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಸ್ವರ್ಣ ಪದಕ ವಿಜೇತರಿಗೆ, ರಾಂಕ್ ವಿಜೇತರಿಗೆ, ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಇದೇ ಸಂದರ್ಭದಲ್ಲಿ, ಪ್ರತಿಭಾ ಪ್ರದರ್ಶನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ, ಪಾರಿತೋಷಕ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಯಿತು. ಶ್ರೀನಿವಾಸ ವಿಶ್ವವಿದ್ಯಾಲಯದ ವಾರ್ಷಿಕ ವರದಿಯನ್ನು ವೇದಿಕೆಯಲ್ಲಿ ಗಣ್ಯರು ಬಿಡುಗಡೆಗೊಳಿಸಿದರು.


ಶ್ರೀನಿವಾಸ ವಿವಿ ವಿಶ್ವಸ್ತ ಮಂಡಳಿ ಸದಸ್ಯರಾದ ಎ. ವಿಜಯಲಕ್ಷ್ಮಿ ಆರ್. ರಾವ್, ಪ್ರೊ. ಇಆರ್‌.  ಎ. ಮಿತ್ರಾ ಎಸ್. ರಾವ್, ಎ. ಇಶಾನ್ ರಾವ್, ಉಪ ಕುಲಪತಿಗಳಾದ ಡಾ. ಕೆ. ಸತ್ಯನಾರಾಯಣ ರೆಡ್ಡಿ, ಕುಲಸಚಿವರಾದ ಡಾ. ಅನಿಲ್ ಕುಮಾರ್, ಮೌಲ್ಯಮಾಪನ ವಿಭಾಗದ ಡಾ. ಶ್ರೀನಿವಾಸ ಮಯ್ಯ ಡಿ., ಅಭಿವೃದ್ಧಿ ವಿಭಾಗದ ಕುಲಸಚಿವ ಡಾ. ಅಜಯ್ ಕುಮಾರ್ ಹಾಗೂ ಶ್ರೀನಿವಾಸ ವಿಶ್ವವಿದ್ಯಾಲಯ ಮತ್ತು ಶ್ರೀನಿವಾಸ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಪ್ರೊ. ಇಆರ್. ಎ. ಮಿತ್ರಾ ಎಸ್. ರಾವ್ ಸ್ವಾಗತಿಸಿ, ಶ್ರೀನಿವಾಸ ವಿವಿ ಅಭಿವೃದ್ಧಿ ಕುಲಸಚಿವರಾದ ಡಾ. ಅಜಯ್ ಕುಮಾರ್ ವಂದಿಸಿದರು. ಡಾ. ಅನ್ನೆಟ್, ಪ್ರೊ. ಎಲ್ಸನ್ ಮತ್ತು ಪ್ರೊ. ಪ್ರಜ್ಞಾ ಒಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top