ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಇಂಗ್ಲಿಷ್ ಭಾಷಾ ದಿನಾಚರಣೆ ಮತ್ತು ‘ಲಿಟರೇಚುರ’ - 2K26' ಸಂಭ್ರಮ

Upayuktha
0

 

ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲಿಷ್ ವಿಭಾಗದ ವತಿಯಿಂದ ‘ಲಿಟರೇಚುರ’ - 2K26’ ಮತ್ತು ಅಂತರಾಷ್ಟ್ರೀಯ ಇಂಗ್ಲಿಷ್ ಭಾಷಾ ದಿನಾಚರಣೆಯನ್ನು  ಏ.23 ರಂದು ಕಾಲೇಜಿನ ಎಸ್‌.ಜೆ.ಎಂ ಸಭಾಂಗಣದಲ್ಲಿ ಆಚರಿಸಲಾಯಿತು.

 

ಕಾರ್ಯಕ್ರಮದ ಮುಖ್ಯ ಅತಿಥಿ ಬ್ಯಾಂಕ್ ಆಫ್ ಬರೋಡಾ ಪುತ್ತೂರು ಪ್ರಾದೇಶಿಕ ಕಚೇರಿಯ ಸಹಾಯಕ ಜನರಲ್ ಮ್ಯಾನೇಜರ್ ಮತ್ತು ಉಪ ಪ್ರಾದೇಶಿಕ ಮುಖ್ಯಸ್ಥ ಅಮಿತ್ ಸಿ. ಶೆಟ್ಟಿ ಮಾತನಾಡಿ, ನಮ್ಮ ಸುತ್ತಮುತ್ತ ಅನೇಕ ಮಾದರಿ ವ್ಯಕ್ತಿಗಳಿದ್ದಾರೆ ತಮ್ಮ ಜೀವನದಲ್ಲಿ ಮೌಲ್ಯವನ್ನು ಸೃಷ್ಟಿಸಿಕೊಂಡಿರುವ ಮತ್ತು ಸಮಾಜದಲ್ಲಿ ಧನಾತ್ಮಕ ಬದಲಾವಣೆಗಳನ್ನು ತಂದಿರುವ ನಾಯಕರನ್ನು ನಾವು ಆದರ್ಶವಾಗಿ ತೆಗೆದುಕೊಳ್ಳಬೇಕು. ನಿಮ್ಮ ಗುರಿಗಳ ಬಗ್ಗೆ ನಿಮಗೆ ಅರಿವಿರಬೇಕು ಎಂದು  ಹೇಳಿದರು.

 


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ ಫಾ ಡಾ ಆ್ಯಂಟನಿ ಪ್ರಕಾಶ್ ಮೊಂತೇರೋ ಮಾತಾನಾಡಿ, ಅಂತರಾಷ್ಟ್ರೀಯ ಇಂಗ್ಲೀಷ್ ಭಾಷೆಯ ಪ್ರಾಮುಖ್ಯತೆಯನ್ನು ತಿಳಿಸಿದರು. ನಮ್ಮ ಜೀವನದಲ್ಲಿ ನಮಗೆ ಗುಣಮಟ್ಟ ಬೇಕು, ಶಿಸ್ತು ಬೇಕು ಮತ್ತು ಒಂದು ರೀತಿಯ ಗಂಭೀರತೆ ಇರಬೇಕು. ನಾವು ಆಚರಿಸುವ ಯಾವುದೇ ಭಾಷೆಗೆ ಗೌರವ ಸಿಗುವುದು ಆ ಭಾಷೆಗೆ ನಾವು ಎಷ್ಟು ಮೌಲ್ಯ ನೀಡುತ್ತೇವೆ ಎಂಬುದರ ಮೇಲೆ ಮಾತ್ರ ಎಂಬುದನ್ನು ನಾವು ಸದಾ ನೆನಪಿನಲ್ಲಿಡಬೇಕು. ಆದ್ದರಿಂದ, ನಿಮ್ಮ ಅಂತರಾತ್ಮದಿಂದ ಸಂವಹನ ನಡೆಸಿ, ನಿಮ್ಮ ವ್ಯಕ್ತಿತ್ವದ ಮೂಲಕ ಸಂವಹನ ನಡೆಸಿ ಎಂದು  ಹೇಳಿದರು.

 

ಅಂತರಾಷ್ಟ್ರೀಯ ಇಂಗ್ಲಿಷ್ ಭಾಷಾ ದಿನಾಚರಣೆ ಅಂಗವಾಗಿ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಮುಖ್ಯ ಅತಿಥಿಗಳು ಬಹುಮಾನ ವಿತರಿಸಿದರು. ಖ್ಯಾತ ಪ್ರೊ ಕಬಡ್ಡಿ ಆಟಗಾರ, ತರಬೇತುದಾರ ಹಾಗೂ ಬ್ಯಾಂಕ್ ಆಫ್ ಬರೋಡಾ ಪುತ್ತೂರು ಉದ್ಯೋಗಿ ಪ್ರಶಾಂತ್ ರೈ, ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಡಾ ಭಾರತಿ ಎಸ್ ರೈ ಮತ್ತು ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಮಾನಸ ಮತ್ತು  ಪ್ರಥಮ ಬಿ.ಎಸ್ಸಿ ಅಪರ್ಣಾ ಪ್ರಾರ್ಥಿಸಿದರು. ದ್ವಿತೀಯ ಬಿ.ಕಾಂ ಅಪೂರ್ವ ಪ್ರಾಸ್ತಾವಿಕ ನುಡಿಗಳನ್ನಾಡಿದರು. ದ್ವಿತೀಯ ಬಿ ಬಿ ಎ ಪ್ರಿಯಾ  ಅತಿಥಿಯನ್ನು ಪರಿಚಯಿಸಿದರು, ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿ ಶೀತಲ್ ರೈ ಸ್ವಾಗತಿಸಿ, ದ್ವಿತೀಯ ಬಿ.ಎ ವಿದ್ಯಾರ್ಥಿನಿ ಐಶ್ವರ್ಯ ವಂದಿಸಿದರು. ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿ ಆಯಿಷತ್ ಜಬೀನಾ ಕಾರ್ಯಕ್ರಮವನ್ನು ನಿರೂಪಿಸಿದರು. ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ನೋವೆಲಿನ್ ಡಿಸೋಜಾ , ಸುಷ್ಮ ಕ್ರಾಸ್ತ ಹಾಗೂ ವಿನಿಲ್ ರೋಹನ್ ಡಿ'ಸೂಜಾ ಸಹಕರಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

 

 

 

 

 

 

 

 

 

 

Post a Comment

0 Comments
Post a Comment (0)
To Top