ಸಂತ ಫಿಲೋಮಿನಾ ಕೇಲೇಜಿನ ತೇಜಸ್ವಿ ಭಟ್ ಕೆ – NCC ಸಬ್ ಲೆಫ್ಟಿನೆಂಟ್ ಆಗಿ ನೇಮಕ

Upayuktha
0

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ತೇಜಸ್ವಿ ಭಟ್ ಕೆ ನಾಗ್ಪುರದ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ (ಕಾಂಪ್ಟಿ) ನಡೆಯುವ ಪ್ರತಿಷ್ಠಿತ ಪ್ರೀ-ಕಮಿಷನ್ ಕೋರ್ಸ್ (PRCN) ಯಶಸ್ವಿಯಾಗಿ ಪೂರ್ಣಗೊಳಿಸಿ ರಾಷ್ಟ್ರೀಯ ಕ್ಯಾಡೆಟ್ ಕಾರ್ಪ್ಸ್ (NCC) ನಲ್ಲಿ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾರೆ. ಜನವರಿ 5ರಿಂದ ಏಪ್ರಿಲ್ 4, 2026 ರವರೆಗೆ ನಡೆದ ಈ ತರಬೇತಿಯಲ್ಲಿ, ಅವರು NCC ಕೆಡೆಟ್‌ಗಳಿಗೆ ಮಾರ್ಗದರ್ಶನ ನೀಡಲು ವಿನ್ಯಾಸಗೊಳಿಸಲಾದ ನಾಯಕತ್ವ, ಶಿಸ್ತು ಮತ್ತು ಸಂಘಟನಾ ಚಾತುರ್ಯ ಮುಂತಾದ ವಿಷಯಗಳ ಕುರಿತು ತರಬೇತಿ ಪಡೆದುಕೊಂಡರು. NCC (DGNCC) ಯ ಮಹಾನಿರ್ದೇಶಕರು ಇವರಿಗೆ NCC ಸಬ್ ಲೆಫ್ಟಿನೆಂಟ್ ಪದವಿಯನ್ನು ನೀಡಿರುತ್ತಾರೆ. ತೇಜಸ್ವಿ ಭಟ್‌ ಕೆ ತಮ್ಮ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನಲ್ಲಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಸಂತ ಫಿಲೋಮಿನಾ ಕಾಲೇಜಿಲ್ಲಿ ಪೂರೈಸಿ, ಹತ್ತು ವರ್ಷಗಳಿಂದ ಸಂತ ಫಿಲೋಮಿನಾ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರ ಈ ಸಾಧನೆಗೆ ಕಾಲೇಜಿನ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ ಮಸ್ಕರೆನ್ಹಾಸ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


“ತೇಜಸ್ವಿ ಭಟ್ ಕೆ ನಮ್ಮ ಕಾಲೇಜಿನ ಹೆಮ್ಮೆಯ ಹಿರಿಯ ವಿದ್ಯಾರ್ಥಿ. ತಮ್ಮ ವಿದ್ಯಾರ್ಥಿ ದಿನಗಳಲ್ಲಿ ಸೀನಿಯರ್ ಅಂಡರ್‌ಆಫೀಸರ್ ಆಗಿದ್ದ ಅವರು ತೀವ್ರ ಪರಿಶ್ರಮ, ಶಿಸ್ತು ಮತ್ತು ಸಮರ್ಪಣೆಯಿಂದ PRCN ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ NCC ನಲ್ಲಿ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡಿರುವುದು ಪ್ರಶಂಸಾರ್ಹ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” 

-ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ, ಪ್ರಾಂಶುಪಾಲರು


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top