ಸಂತ ಫಿಲೋಮಿನಾ ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

Upayuktha
0


ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇದರ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಬೆಳ್ಳಿ ಹಬ್ಬ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು‌.


ಕಾಲೇಜಿನ ಪ್ರಾಂಶುಪಾಲರಾದ ರೆ| ಡಾ|ಆಂಟೋನಿ ಪ್ರಕಾಶ್ ಮೊಂತೆರೊ ಕಾರ್ಯಕ್ರಮದಲ್ಲಿ ಮಾತನಾಡಿ "ಸ್ನಾತಕೋತ್ತರ ವಿದ್ಯಾರ್ಥಿಗಳು ಕೇವಲ ಓದಿಗೆ ಸೀಮಿತವಾಗದೆ ಇಂತಹ ಎಲ್ಲಾ ಪಠ್ಯೇತರ ಚಟುವಟಿಕೆ ಗಳಲ್ಲೂ ಕ್ರೀಯಾಶೀಲರಾಗಿ ತೊಡಗಿಸಿಕೊಳ್ಳಬೇಕು" ಎಂದು ಸಲಹೆ ನೀಡಿದರು. ಸ್ನಾತಕೋತ್ತರ ವಿಭಾಗದ ವಿಧ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಗಳಾದ ಶೀತಲ್ ಕುಮಾರ್ ಹಾಗೂ ಪೃಥ್ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿಧ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸುವ ಒಟ್ಟು 24 ವಿವಿಧ ಕಾರ್ಯಕ್ರಮಗಳು ಪ್ರದರ್ಶನಗೊಂಡವು. ಕಾಲೇಜಿನ ವಿವಿಧ ಸ್ನಾತಕೋತ್ತರ ವಿಭಾಗದ ಸಂಯೋಜಕರು ಹಾಗೂ ಪ್ರಾಧ್ಯಾಪಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಥಮ ವರ್ಷದ ಗಣಿತ ಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಶ್ರೀದೇವಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top