ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ವಾಣಿಜ್ಯ ವಿಭಾಗದ ವತಿಯಿಂದ “ಎಂಪ್ರೆಸಾ 2K26– ವಿಷನ್ ಟು ವಿಕ್ಟರಿ” ಎಂಬ ರಾಜ್ಯ ಮಟ್ಟದ ಅಂತರ ಕಾಲೇಜು ವಾಣಿಜ್ಯ ಹಬ್ಬವನ್ನು ಕಾಲೇಜಿನ ಸಿಲ್ವರ್ ಜುಬಿಲಿ (SJM) ಸಭಾಂಗಣದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾನಾಡಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಡಾ. ಆಂಟೋನಿ ಪ್ರಕಾಶ್ ಮೊಂತೆರೊ ಅವರು ವಾಣಿಜ್ಯ ಶಿಕ್ಷಣದಲ್ಲಿ ನಾವೀನ್ಯತೆ ಮತ್ತು ಪ್ರಾಯೋಗಿಕ ಅನುಭವದ ಪ್ರಾಮುಖ್ಯತೆಯನ್ನು ಹೇಳಿದರು.
ಕಾರ್ಗಿಲ್ ಬಿಸಿನೆಸ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಕಾಂಪ್ಲೈಯನ್ಸ್ ಅನಲಿಸ್ಟ್ ಕು. ಪವನಾ ಎ. ಜಿ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಡೀನ್ ಆಗಿರುವ ಪ್ರೊ. ಪ್ರೇಮಲತಾ ಕೆ. ಅವರು ಸ್ವಾಗತಿಸಿ, ಫೆಸ್ಟ್ ಸಂಯೋಜಕಿ ಕು.ಪ್ರತೀಕ್ಷಾ ಶೆಟ್ಟಿ ಗಣ್ಯರನ್ನು ಪರಿಚಯಿಸಿ, ಸಿಬ್ಬಂದಿ ಸಂಯೋಜಕ ಪ್ರವೀಣ. ಡಿ ವಂದನಾರ್ಪಣೆಗೈದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮುಝಾಮಿಲ್ ನಿರೂಪಿಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಜನಪ್ರಿಯ ಆಸ್ಪತ್ರೆಯ ಪಿ.ಆರ್.ಒ (PRO) ಭಾತೀಷ ಅಳಕೆಮಜಲು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸಂಘಟಕರ ಕಾರ್ಯಕ್ರಮದ ಆಯೋಜನೆ ಮತ್ತು ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಭಾಗವಹಿಸುವಿಕೆಯನ್ನು ಶ್ಲಾಘಿಸಿದರು. ನಿಧಾ ರೆಹಮತ್ ಗಣ್ಯರನ್ನು ಪರಿಚಯಿಸಿ,ಫೆಸ್ಟ್ ಸಂಯೋಜಕ ಅಬ್ದುಲ್ ಅಹದ್ ಸ್ವಾಗತಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸ್ವಾತಿ ಶೆಟ್ಟಿ ಡಿ. ವಂದಿಸಿ, ಮೆಹರೂಫಾ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಚಾಂಪಿಯನ್ ಪಟ್ಟವನ್ನು ವಿವೇಕಾನಂದ ಕಾಲೇಜು (ಸ್ವಾಯತ್ತ), ಪುತ್ತೂರು ಮತ್ತು ರನ್ನರ್ಸ್ ಅಪ್ ಸ್ಥಾನವನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜು, ಸುಬ್ರಹ್ಮಣ್ಯದ ವಿದ್ಯಾರ್ಥಿಗಳು ಪಡೆದುಕೊಂಡರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

