ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಕಾಲೇಜು ಪದವಿ ಹಾಗೂ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನಡೆಸಿದ ಪಡೀಲು ಶಂಕರ ಭಟ್ಟ ಸಂಸ್ಮರಣೆಯ “ಡಾ. ಕೆ. ಶಿವರಾಮ ಕಾರಂತರ ಬೆಟ್ಟದ ಜೀವ ಕಾದಂಬರಿಯಲ್ಲಿ ಪ್ರಕೃತಿಯ ವರ್ಣನೆ” ವಿಷಯದ ಮೇಲೆ ಏರ್ಪಡಿಸಿದ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ದಿನಾಂಕ 02-05-2026 ಶನಿವಾರದಂದು ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ.
ಪ್ರಬಂಧ ಸ್ಪರ್ಧೆಯಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಪದವಿ ಪೂರ್ವ ಕಾಲೇಜು ಅಳಿಕೆಯ ಧನ್ವಿತಾ ಕಾರಂತ ಪ್ರಥಮ, ಡಾ. ಎ. ವಿ. ಬಾಳಿಗ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಕುಮಟಾ ಉತ್ತರ ಕನ್ನಡ ಇಲ್ಲಿಯ ವಿನಾಯಕ ರಮೇಶ ನಾಯ್ಕ ದ್ವಿತೀಯ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯ ಇಲ್ಲಿನ ಸಾಕ್ಷಿ ಕೆ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ. ಇವರಿಗೆ ಪ್ರಮಾಣ ಪತ್ರ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಗುವುದು ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


