ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬಲು ಬೇಸಿಗೆ ಶಿಬಿರಗಳು ಅತ್ಯಗತ್ಯ: ಡಾ. ಐಶ್ವರ್ಯ

Upayuktha
0


ಶಿವಮೊಗ್ಗ: ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ಮಕ್ಕಳ ಕಲಿಕಾ ಕೇಂದ್ರ ಹಾಗೂ ನಮ್ಮ ಹಳ್ಳಿ ಥಿಯೇಟರ್(ರಿ) ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮನಃಸ್ಫೂರ್ತಿ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಪಾಸಿಟಿವ್ ಮೈಂಡ್ ಆಸ್ಪತ್ರೆಯ ಆಪ್ತ ಸಮಾಲೋಚಕರಾದ ಡಾ.ಐಶ್ವರ್ಯ ರವರು "ಮಕ್ಕಳಿಗೆ ಪ್ರಸ್ತುತ ಒತ್ತಡದ ಬದುಕಿದೆ. ಅದನ್ನು ದೂರಗೊಳಿಸಲು ಬೇಸಿಗೆ ಶಿಬಿರಗಳ ಪಾತ್ರ ಬಹಳ ಮುಖ್ಯ. ಪೋಷಕರು ಇದನ್ನು ಮನಗಂಡು ಇಂತಹ ಶಿಬಿರಗಳಿಗೆ ಮಕ್ಕಳನ್ನು ಸೇರಿಸಬೇಕು, ಹಾಗೆಯೇ ಶಿಬಿರಗಳು ಮಕ್ಕಳಿಗೆ ವೇದಿಕೆಯ ಭಯವನ್ನು ಹೋಗಲಾಡಿಸಿ ಮಾನಸಿಕವಾಗಿ ಧೈರ್ಯವನ್ನು ತುಂಬುತ್ತದೆ ಮತ್ತು ಅವರನ್ನು ಮೊಬೈಲ್ ನಿಂದ ದೂರವಿಡುವುದಕ್ಕೆ ಸಹಕಾರಿಯಾಗಿದೆ. ಸರ್ಕಾರಿ ಶಾಲೆಯ ಮಕ್ಕಳಿಗೆ ಈ ಶಿಬಿರ ಬಹಳ ಉಪಯುಕ್ತವಾಗಿದೆ" ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಾನಸ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಡಾ.ರಜನಿ.ಎ.ಪೈ ರವರು ಮಾತನಾಡಿ, "ಮನಃಸ್ಫೂರ್ತಿ ಬೇಸಿಗೆ ಶಿಬಿರವು ಸಂಪೂರ್ಣ ಉಚಿತವಾಗಿದ್ದು ಇದು ಒಂಬತ್ತನೇ ವರ್ಷದ ಶಿಬಿರವಾಗಿದೆ. ಮುಖ್ಯವಾಗಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಮತ್ತು ಸರ್ಕಾರಿ ಶಾಲೆಯ ಮಕ್ಕಳಿಗಾಗಿ ಈ ಶಿಬಿರವು ರೂಪುಗೊಂಡಿದ್ದು ನಾಟಕ, ಚಿತ್ರಕಲೆ, ಹಾಡು, ಕ್ರಾಫ್ಟ್, ಪರಿಸರದ ಅರಿವು.... ಹೀಗೆ ಇತ್ಯಾದಿ ವಿಷಯಗಳನ್ನು ಇಂದಿನಿಂದ ಹೇಳಿಕೊಡಲಾಗುತ್ತದೆ" ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಶಿಬಿರದ ನಿರ್ದೇಶಕರಾದ ಶ್ರೀ ಯುತ ಮಂಜುನಾಥ ಸ್ವಾಮಿ, ಶಿಬಿರದ ಸಂಚಾಲಕರಾದ ಶ್ರೀಮತಿ ರಂಗನಾಯಕಿ, ಶ್ರೀ ಮತಿ ಜ್ಯೋತಿ ಅರುಣ್ ಕುಮಾರ್, ಶ್ರೀಯುತ ಪ್ರತೀಕ್.ಸಿ.ಎಂ, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ಪ್ರಶಿಕ್ಷಣಾರ್ಥಿಗಳಾದ ಸ್ಫೂರ್ತಿ.ವೈ.ಹೆಚ್, ಮಂಜುಳ, ಜ್ಯೋತಿ, ರಾಹುಲ್, ಶಶಾಂಕ್, ಮಂಜು.ಆರ್.ಪಿ, ನಮ್ಮ ಹಳ್ಳಿ ಥಿಯೇಟರ್ ನ ಸದಸ್ಯರು, ಮನಃಸ್ಫೂರ್ತಿ ಮಕ್ಕಳ ಕಲಿಕಾ ಕೇಂದ್ರದ ಶಿಕ್ಷಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top