ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಹೊಸಬೆಟ್ಟು ನಿವಾಸಿಗಳಾದ ಸುರೇಶ್ ಕರ್ಕೇರ ಶಕುಂತಲಾ ದಂಪತಿಗಳ ಅವಳಿ ಪುತ್ರಿಯರು ವೈಭವಿ ಎಸ್ ಕರ್ಕೇರ ಪಿಯುಸಿ ಪರೀಕ್ಷೆಯಲ್ಲಿ 2 ನೇ ರ‍್ಯಾಂಕ್ ( 598 ) ಹಾಗೂ ವೈಷ್ಣವಿ ಎಸ್ ಕರ್ಕೇರ 10 ನೇ ರ‍್ಯಾಂಕ್ ( 590 ) ಪಡೆದಿದ್ದಾರೆ.
ಶನಿವಾರ ಮಂಗಳೂರು ಉತ್ತರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರು ವಿದ್ಯಾರ್ಥಿನಿಯರ ನಿವಾಸಕ್ಕೆ ತೆರಳಿ ಅಭಿನಂದಿಸಿ, ಮುಂದಿನ ಭವಿಷ್ಯಕ್ಕೆ ಶುಭ ಹಾರೈಕೆ ತಿಳಿಸಿದರು.
ಈ ಸಂದರ್ಭ, ಗಂಗಾಧರ ಗುರಿಕಾರ ಹೊಸಬೆಟ್ಟು , ಶರತ್ ಎಲ್ ಕರ್ಕೇರ ಅಧ್ಯಕ್ಷರು ವೀರ ಮಾರುತಿ ವ್ಯಾಯಾಮ ಶಾಲೆ,ಹೊಸಬೆಟ್ಟು, ಮಹಾ ಶಕ್ತಿಕೇಂದ್ರ ಅಧ್ಯಕ್ಷರಾದ ದಿನಕರ್ ಇಡ್ಯಾ, ಸುನೀಲ್ ಕುಳಾಯಿ, ಮಂಡಲ ಕಾರ್ಯದರ್ಶಿ ಪುಷ್ಪರಾಜ್ ಮುಕ್ಕ ನಿಕಟ ಪೂರ್ವ ಮನಪಾ ಸದಸ್ಯರಾದ ಶೋಭಾ ರಾಜೇಶ್, ಶ್ವೇತಾ ಪೂಜಾರಿ, ನಯನ ಕೋಟ್ಯಾನ್, ವಾರ್ಡ್ ಅಧ್ಯಕ್ಷರು ರಾಜೇಶ್ ಮುಕ್ಕ, ಕಾರ್ಯದರ್ಶಿ ಅನಂತ್ ರಾಜ್, ಪಕ್ಷದ ಅನನ್ಯ ಜವಾಬ್ದಾರಿಯುತ ಕಾರ್ಯಕರ್ತರು ಭಾಗವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


