ಪುತ್ತೂರು, ಏ 11: ಪರಂಪರಾಗತವಾಗಿ ಬಂದ ನಮ್ಮ ಸಂಸ್ಕೃತಿ, ಆಚರಣೆ, ಹಬ್ಬ ಹರಿದಿನಗಳನ್ನು ಉಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇದಕ್ಕೆ ಪೂರಕವಾಗಿ ಕೆ ಆರ್ ಎಂ ಎಸ್ ಎಸ್ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಸವಣೂರು ಸೀತಾರಾಮ ರೈ ತಿಳಿಸಿದರು.
ಇವರು, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ಮಂಗಳೂರು ವಿಭಾಗ ವಿದ್ಯಾರಶ್ಮಿ ಶಿಕ್ಷಣ ಸಮೂಹ ಸಂಸ್ಥೆ ಸವಣೂರು ಇಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವ ಸಮಾರಂಭದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ಉದ್ಯಮಿ, ಸೂರಜ್ ಕುಮಾರ್ ಮಾತನಾಡಿ, ಯುಗಾದಿ ಉತ್ಸವವನ್ನು ಶಿಕ್ಷಣ ಸಂಸ್ಥೆಗಳಲ್ಲಿ ಆಚರಿಸುವ ಮೂಲಕ ನಮ್ಮ ಸಂಸ್ಕೃತಿ, ಆಚರಣೆ, ಸಂಪ್ರದಾಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದಕ್ಕೆ ಸಾಧ್ಯವಾಗುತ್ತದೆ. ಇಂತಹ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ. ನಮ್ಮತನವನ್ನು ಉಳಿಸಿಕೊಂಡು ರಾಷ್ಟ್ರ ನಿರ್ಮಾಣದ ದೃಷ್ಟಿಯಿಂದ ಮುಂದಿನ ಪೀಳಿಗೆಗೆ ಕೊಡುಗೆಯನ್ನು ನೀಡುವಂತಾಗಲಿ. ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ಅಶ್ವಿನ್ ಶೆಟ್ಟಿ, ಕೆ ಆರ್ ಎಂ ಎಸ್ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಮಾಧವ ಎಂ ಕೆ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ರಾಜಲಕ್ಷ್ಮೀ ಎಸ್ ಆರ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೆ ಆರ್ ಎಂ ಎಸ್ ಎಸ್ ಮಾಧ್ಯಮ ಪ್ರಮುಖ್ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕರಾದ ಸಹನಾ ವಂದಿಸಿದರು. ಜಯಲಕ್ಷ್ಮಿ ಕಲ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

