ತೆಂಕನಿಡಿಯೂರು ಕಾಲೇಜು: ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕ ಲೋಕಾರ್ಪಣೆ

Upayuktha
0

 


ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಸಹಯೋಗದೊಂದಿಗೆ ಒಳಾಂಗಣ ಸಭಾಂಗಣದ ವೇದಿಕೆ ಮತ್ತು ಶುದ್ಧ ಜಲ ಘಟಕದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಲಯನ್ಸ್ ಕ್ಲಬ್ ಜಿಲ್ಲಾ ಗವರ್ನರ್ ಸಪ್ನ ಸುರೇಶ್ ಪಿಎಂಜೆ.ಎಫ್ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ್ವಿತೀಯ ಉಪ ಜಿಲ್ಲಾ ಗವರ್ನರ್ ಹರಿಪ್ರಸಾದ್ ರೈ, ಲಯನ್ಸ್ ಕ್ಲಬ್ ಉಡುಪಿ ಅಧ್ಯಕ್ಷರಾದ ದಿನೇಶ್ ಕಿಣಿ, ವಲಯಾಧ್ಯಕ್ಷ ಲುಯಿಸ್ ಲೋಬೊ, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಹೆಗ್ಡೆ, ಲಯನ್ಸ್ ಕ್ಲಬ್ ಉಡುಪಿ ಕೋಶಾಧಿಕಾರಿ ರಮಾನಂದ ನಾಯಕ್, ಬೋಧಕ ಬೋಧಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. 

 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)
To Top