ಸಂವಿಧಾನದ ಆಶಯಗಳು ಕಾರಂತರ ಕಾದಂಬರಿಗಳಲ್ಲಿ ಜೀವಂತ : ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ

Upayuktha
0

 


 ಉಡುಪಿ : ಸಂವಿಧಾನದ ಮೂಲ ಆಶಯಗಳಾದ ಧಾರ್ಮಿಕ ಹಕ್ಕು, ಶೋಷಣೆಯ ವಿರುದ್ಧ ಹಕ್ಕು, ಸಾಮಾಜಿಕ ನ್ಯಾಯ ಪರಿಸರ ಸಂರಕ್ಷಣೆಯ ಕುರಿತು ಕಾರಂತರು ತಮ್ಮ ಕಾದಂಬರಿಗಳಲ್ಲಿ ವಿವರಿಸುವ ಮೂಲಕ  ಸಂವಿಧಾನದ ಆಶಯಗಳನ್ನು ವ್ಯಕ್ತಪಡಿಸಿದ್ದಾರೆ.   ಮೂಲಕ ಸಂವಿಧಾನದ ಕುರಿತು ಜನ ಸಾಮಾನ್ಯರು ಸೃಷ್ಟಿಸಿಕೊಂಡ ಅನೇಕ ಗೊಂದಲಗಳಿಗೆ ಕಾದಂಬರಿಗಳಲ್ಲಿ ಉತ್ತರ ದೊರಕಿಸಿಕೊಟ್ಟಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಸಂವಿಧಾನ ತಜ್ಞ  ಕೊಕ್ಕರ್ಣೆ ಸುರೇಂದ್ರನಾಥ್  ಶೆಟ್ಟಿ ಹೇಳಿದರು.

ಅವರು ಸೋಮವಾರ ಮುಲ್ಕಿಯ ವಿಜಯಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ  ಇವರ ಸಹಯೋಗದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-14 ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಕಾರಂತರು ತಮ್ಮ ಕಾದಂಬರಿಗಳಲ್ಲಿ ಸಮಾನತೆಯನ್ನು ಪ್ರತಿಪಾದಿಸಿದವರು. ಹಿಂದುಳಿದ ಸಮುದಾಯವನ್ನು ಮುಖ್ಯ ವಾಹಿನಿಗೆ ತರುವುದು ಕಾರಂತರ ಉದ್ದೇಶವಾಗಿದ್ದು, ಪ್ರತಿಯೊಬ್ಬರಲ್ಲೂ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವವನ್ನು ರೂಪಿಸಲು ಶ್ರಮಿಸುವುದು ಭಾರತೀಯರ ಕರ್ತವ್ಯ ಎಂದರು.              

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಶೈಲಜಾ ವೈ.ವಿ, ಉಪನ್ಯಾಸಕಿ ಸೌಮ್ಯ ಉಪಸ್ಥಿತರಿದ್ದರು. ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿನಿಯರಾದ ದೀಪ್ತಿ ನಿರೂಪಿಸಿ, ಲಾವಣ್ಯ ವಂದಿಸಿದರು.         

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter    

Post a Comment

0 Comments
Post a Comment (0)
To Top