ಪತ್ರಕರ್ತರ ಗ್ರಾಮ ವಾಸ್ತವ್ಯದ ಬಳಿಕ ಕುತ್ಲುರು ಸರಕಾರಿ ಶಾಲೆಯ ಚಿತ್ರಣವೇ ಬದಲು: ಕನಕವರ್ಮ ಜೈನ್

Upayuktha
0


ಮಂಗಳೂರು: ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಬಳಿಕ ಶಾಲೆಯ ಚಿತ್ರಣವೇ ಬದಲಾಗಿದೆ.ಮೂಲಭೂತ ಸೌಕರ್ಯ ಹೆಚ್ಚಾಗಿದೆ. ವಿದ್ಯಾರ್ಥಿಗಳ ಸಂಖ್ಯೆಯಲ್ಲೂ ಕೂಡಾ ಹೆಚ್ಚಳ ವಾಗಿದೆ ಎಂದು ಕುತ್ಲುರು ಸರಕಾರಿ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕವರ್ಮಾ ಜೈನ್ ಹೇಳಿದರು.


ಮಂಗಳೂರು ಪತ್ರಿಕಾ ಭವನದಲ್ಲಿ ಗುರುವಾರ ಕುತ್ಲುರು ಸರಕಾರಿ ಶಾಲೆ ವತಿಯಿಂದ  ಶಾಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಎಂ ಆರ್ ಪಿ ಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಹಾಗೂ ಬಿಎಎಸ್ಎಫ್ ನಿರ್ದೇಶಕ ಶ್ರೀನಿವಾಸ್ ಪ್ರಾಣೇಶ್ ಅವರನ್ನು ಸನ್ಮಾನಿಸಿ ಮಾತನಾಡಿದರು.


ಈ ಶೈಕ್ಷಣಿಕ ವರ್ಷದಿಂದ ಕುತ್ಲುರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ, ಯು ಕೆ ಜಿ ತರಗತಿ ಆರಂಭಿಸಲು  ರಾಜ್ಯ ಸರಕಾರ ಅನುಮತಿ ನೀಡಿದೆ. ಈಗಾಗಲೇ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಭರವಸೆ ನೀಡಿದ್ದಾರೆ. ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿ ಅಭಿಯಾನ ಕೂಡಾ ಆರಂಭಿಸಲಾಗಿದೆ  ಎಂದು ಹೇಳಿದರು.


ಎಂ ಆರ್ ಪಿ ಎಲ್ ನಿವೃತ್ತ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ಮಾತನಾಡಿ ತಮ್ಮ ಸಂಸ್ಥೆ ಶಿಕ್ಷಣ ಹಾಗೂ ಅರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುತ್ತಾ ಬಂದಿದೆ. ಪ್ರತಿ ವರ್ಷ ಕೋಟ್ಯಂತರ ರೂಪಾಯಿಯನ್ನು ಸಿ ಎಸ್ ಆರ್ ನಿಧಿ ಮೂಲಕ ನೀಡಲಾಗುತ್ತದೆ. ಕುತ್ಲುರು ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ನೆರವಿನ ಭರವಸೆ ನೀಡಿದರು.


ಬಿ ಎ ಎಸ್ ಎಫ್ ನಿರ್ದೇಶಕ ಶ್ರೀನಿವಾಸ್ ಪ್ರಾಣೇಶ್ ಮಾತನಾಡಿ ಪತ್ರಕರ್ತರ ಸಂಘ ಸಮಾಜಕ್ಕೆ ಮಾದರಿಯಾದ ಕೆಲಸ ಮಾಡುತ್ತಿದೆ. ತಮ್ಮ ಸಂಸ್ಥೆ ವತಿಯಿಂದ ಶಾಲೆಗೆ ಕುಡಿಯುವ ನೀರಿನ ಘಟಕ, ಸ್ಮಾರ್ಟ್ ಕ್ಲಾಸ್, ಸಮವಸ್ತ್ರ ಹಾಗೂ ನೋಟ್ ಬುಕ್ ನೀಡಲಾಗಿದೆ. ಮುಂದೆಯೂ ಈ ಸರಕಾರಿ ಶಾಲೆ ಅಭಿವೃದ್ಧಿಗೆ ತಮ್ಮ ಸಂಸ್ಥೆ ಕೈ ಜೋಡಿಸಲಿದೆ ಎಂದು ಹೇಳಿದರು.


ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ ವಿ ದರ್ಶನ್ ಈ ಸರಕಾರಿ ಶಾಲೆಗೆ ಭೇಟಿ ನೀಡಿದ ಬಳಿಕ ಶಾಲೆಯ ಚಿತ್ರಣವೇ ಬದಲಾಗಿದೆ. ಕೆ ವಿ ಪ್ರಭಾಕರ್ ಅವರು ಸಮವಸ್ತ್ರ, ಬ್ಯಾಗ್, ಕಂಪ್ಯೂಟರ್ಸ್, ಪ್ರೊಜೆಕ್ಟರ್, ಶಾಲೆಗೆ ಪೈಂಟ್ ಕೊಡಿಸುವ ವ್ಯವಸ್ಥೆ ಮಾಡಿದ್ದಾರೆ. ಮಕ್ಕಳ ಕಷ್ಟವನ್ನು ಅರಿತು ಶಾಲೆಗೆ ಶೀಘ್ರವೇ ಮಿನಿ ಬಸ್ ಕೂಡಾ ನೀಡುವುದಾಗಿ ತಿಳಿಸಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಅವರು ಈ ಶಾಲೆಗೆ ಎಲ್ ಕೆ ಜಿ, ಯು ಕೆ ಜಿ ಆರಂಭಿಸಲು ಎರಡು ತರಗತಿ ನಿರ್ಮಿಸಿ ಕೊಡುವುದಾಗಿ ತಿಳಿಸಿದ್ದಾರೆ. ಶಾಲೆಯ ಮನವಿ ಮೇರೆಗೆ ಪ್ರಿಂಟರ್, ಬೆಂಚ್, ಡೆಸ್ಕ್, 3 ಕಂಪ್ಯೂಟರ್ಸ್  ಒದಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಮಾಹಿತಿ ನೀಡಿದರು.


ಕಾರ್ಯಕ್ರಮ ದಲ್ಲಿ ಬಿಎಎಸ್ಎಫ್ ಮಾನವ ಸಂಪನ್ಮೂಲ ವಿಭಾಗದ ಪ್ರಬಂಧಕ ಸಂತೋಷ ಪೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ ಎನ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ರೋಟರಿ ಕ್ಲಬ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ,ಕುತ್ಲುರು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಸದಸ್ಯರಾದ ಗಾಯತ್ರಿ, ಹರ್ಷಿತ್ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top