'ಶಾಸ್ತ್ರೀಯ ಕಲೆಗಳನ್ನು ಕಿರಿಯ ತಲೆಮಾರಿಗೆ ವರ್ಗಾಯಿಸುವ ಕೆಲಸವಾಗಬೇಕು'

Upayuktha
0



ಸುರತ್ಕಲ್‌: ಶಾಸ್ತ್ರೀಯ ಸಂಗೀತ ಮತ್ತು ಶಾಸ್ತ್ರೀಯ ನೃತ್ಯ ಕಲೆ ದೈವಿಕ ಕಲೆಗಳಾಗಿದ್ದು ಹಿರಿಯ ಕಲಾವಿದರು ಕಿರಿಯ ತಲೆಮಾರಿಗೆ ವರ್ಗಾಯಿಸುವ ಕಾರ್ಯ ಮಾಡ ಬೇಕು. ಅವಿಭಜಿತ ದಕ್ಷಿಣ ಕನ್ನಡದಲ್ಲಿ ಕಳೆದ ಕೆಲವು ದಶಕಗಳಿಂದ ಪ್ರತಿಭಾವಂತ ಯುವ ಕಲಾವಿದರು ಪ್ರಕಾಶಕ್ಕೆ ಬರುತ್ತಿದ್ದು, ಸಂಗೀತ ಮತ್ತು ನೃತ್ಯ ಕಲಾ ಸಂಘಟಕರ ಪಾತ್ರ ಹಿರಿದಾಗಿದೆ. ಶಾಸ್ತ್ರೀಯ ಕಲೆಗಳ ಅಧ್ಯಯನಕ್ಕೆ ಪೋಷಕರು ಮಕ್ಕಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಚೆನ್ನೈಯ ಹಿರಿಯ ಸಂಗೀತ ಕಲಾವಿದ ವಿದ್ವಾನ್ ಶ್ರೀಕಾಂತ್ ಗೋಪಾಲಕೃಷ್ಣನ್ ನುಡಿದರು.


ಸುರತ್ಕಲ್ ನ ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ನಾಗರಿಕ ಸಲಹಾ ಸಮಿತಿ ಸಹಯೋಗದಲ್ಲಿ ಸುರತ್ಕಲ್ ನ ಅನುಪಲ್ಲವಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ಭರತ ನಾಟ್ಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡುತ್ತಿದ್ದರು.


ಪ್ರತಿಭಾವಂತ ಯುವ ಕಲಾವಿದರಿಗೆ ಅವಕಾಶಗಳನ್ನು ನೀಡುವ ಮೂಲಕ ಸಾಂಸ್ಕೃತಿಕ ಸಂಘಟನೆಗಳು ಸಂಸ್ಕೃತಿ ಪ್ರಚಾರದ ಕಾರ್ಯ ಮಾಡಬಹುದಾಗಿದೆ ಎಂದರು. ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಗೌರವಾಧ್ಯಕ್ಷ ಕರ್ಮಯೋಗಿ ಹರಿಕೃಷ್ಣ ಪುನರೂರು ಶುಭ ಹಾರೈಸಿದರು.


ಶ್ರೀ ಕ್ಷೇತ್ರ ಎಡನೀರು ಮಠದ ರಾಜೇಂದ್ರ ಕಲ್ಲೂರಾಯ ಅವರು ಕಲಾವಿದ ಶ್ರೀಕಾಂತ್ ಗೋಪಾಲಕೃಷ್ಣನ್ ಅವರನ್ನು ಗೌರವಿಸಿದರು. ಹಿರಿಯ ಕಲಾವಿದ ವಿದ್ವಾನ್ ಚಂದ್ರಶೇಖರ ನಾವಡ, ನಾಗರಿಕ ಸಲಹಾ ಸಮಿತಿಯ ಸದಸ್ಯ ಕೃಷ್ಣಮೂರ್ತಿ. ಪಿ., ನೃತ್ಯ ವಿದುಷಿ ಪ್ರವಿತಾ ಅಶೋಕ್, ಜಯಶ್ರೀ ಆರ್. ಭಟ್, ವಿಭು ರಾವ್ ಉಪಸ್ಥಿತರಿದ್ದರು.


ಮಣಿ ಕೃಷ್ಣಸ್ವಾಮಿ ಅಕಾಡೆಮಿಯ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ಸ್ವಾಗತಿಸಿ ಗುಣಮಟ್ಟದ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಕಲಾವಿದರಿಗೆ ನಿರಂತರ ವಾಗಿ ವೇದಿಕೆ ಕಲ್ಪಿಸಿಕೊಡಲಾಗುತ್ತಿದೆ ಎಂದರು.


ಶೋಭಿತ ಭಟ್ ಕಿನ್ನಿಗೋಳಿಯವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ನಡೆಯಿತು. ಮಹತೀ ಕೆ., ಕಾರ್ಕಳ ವಯಲಿನ್‌ನಲ್ಲಿ, ಸಂದೀಪ್ ರಾಮಮೂರ್ತಿ, ಎನ್.ಐ.ಟಿ.ಕೆ. ಸುರತ್ಕಲ್ ಮೃದಂಗದಲ್ಲಿ ವಿದ್ವತ್ ರಾವ್ ತಂಬೂರದಲ್ಲಿ ಸಹಕರಿಸಿದರು. ಗಾರ್ಗಿದೇವಿ ಕುಂದಾಪುರ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top