ʻUnveiling the Elements of Changeʼ ಹಾಗೂ ʻMind Mattersʼ ಕಾರ್ಯಾಗಾರ
ಅಪರಾಹ್ನದ ಬಳಿಕ “Mind Matters” ಎಂಬ ಮನೋವಿಜ್ಞಾನ ಆಧಾರಿತ ವಿಶೇಷ ಅವಧಿಯನ್ನು ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುವ ಉದ್ದೇಶದಿಂದ ಆಯೋಜಿಸಲಾಯಿತು. ಈ ಅವಧಿಯನ್ನು ವಿವೇಕಾನಂದ ಕಲೆ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗ ಮುಖ್ಯಸ್ಥರಾದ ಚಂದ್ರಕಾಂತ ಗೋರೆ ಇವರು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಮುಖ್ಯವಾಗಿ ನಮ್ಮ ಮನಸ್ಸು ಹೇಗೆ ಕೆಲಸ ಮಾಡುತ್ತದೆ? ಮನಸ್ಸಿನ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದರ ಅಗತ್ಯತೆ ಹಾಗೂ ಮನೋ ನಿಯಂತ್ರಣ ಕುರಿತಾದ ವಿಷಯಗಳನ್ನು ಹಲವು ಚಟುವಟಿಕೆಗಳ ಮೂಲಕ ಶಿಬಿರಾರ್ಥಿಗಳಿಗೆ ಮನದಟ್ಟುಮಾಡಿದರು. ಕಾಲೇಜಿನ ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


