ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿಗೆ ಚಾಂಪಿಯನ್ ರನ್ನರ್ ಅಪ್ ಪ್ರಶಸ್ತಿ

Upayuktha
0

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮಹಿಳೆಯರ ತಂಡವು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ರಾಜ್ಯಮಟ್ಟದ 27ನೇ ಅಂತರ್ ಕಾಲೇಜು ಅತ್ಲೆಟಿಕ್ ಸ್ಪರ್ಧೆಯಲ್ಲಿ 5 ಚಿನ್ನ, 2 ಬೆಳ್ಳಿ ಮತ್ತು 2 ಕಂಚಿನ ಪದಕದ ಸಾಧನೆಯೊಂದಿಗೆ ಮಹಿಳೆಯರ ವಿಭಾಗದ ಚಾಂಪಿಯನ್‍ಶಿಪ್‍ನಲ್ಲಿ ರನ್ನರ್ ಅಪ್ ಟ್ರೋಫಿಯನ್ನು ಗೆದ್ದುಕೊಂಡಿದ್ದಾರೆ.


ತಿಪಟೂರಿನ ಕಲ್ಪತರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ  ಮಾರ್ಚ್ 26 ರಿಂದ 29ರ ವರೆಗೆ ನಡೆದ ಈ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸಂಯೋಜನೆಗೊಳಪಟ್ಟ 126 ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳ 1450 ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು. 


ಮಹಿಳೆಯರ ವಿಭಾಗದಲ್ಲಿ 

ದ್ವಿತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಅನಘಾ.ಕೆ.ಎನ್ 200ಮೀ ಓಟ, 400 ಮೀ ಓಟ ಹಾಗೂ 4x100ಮೀ ರಿಲೇಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ಪೂಜಾಶ್ರೀ ಹೈಜಂಪ್ ಮತ್ತು 4x100ಮೀ ರಿಲೇಯಲ್ಲಿ ಚಿನ್ನ ಹಾಗೂ ಹೆಪ್ಟತ್ಲಾನ್‍ನಲ್ಲಿ ಕಂಚಿನ ಪದಕ, ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ಅನನ್ಯ.ಕೆ.ಬಿ ಹೆಪ್ಟತ್ಲಾನ್ ಮತ್ತು 4x100ಮೀ ರಿಲೇಯಲ್ಲಿ ಚಿನ್ನ ಹಾಗೂ 100 ಮೀ ಹರ್ಡಲ್ಸ್‍ನಲ್ಲಿ ಬೆಳ್ಳಿಯ ಪದಕ, ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ಅನುಶ್ರೀ.ಎಂ 4x100ಮೀ ರಿಲೇಯಲ್ಲಿ ಚಿನ್ನ, ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅರ್ಪಿತಾ ಬಾಲಚಂದ್ರ ನಾಯ್ಕ್ 100ಮೀ ಹರ್ಡಲ್ಸ್‍ನಲ್ಲಿ ಬೆಳ್ಳಿ, 4x400ಮೀ ರಿಲೇಯಲ್ಲಿ ಕಂಚು, ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ 4x400ಮೀ ರಿಲೇಯಲ್ಲಿ ಕಂಚು, ಅಂತಿಮ ವರ್ಷದ ಡಾಟಾ ಸೈನ್ಸ್ ವಿಭಾಗದ ಅಶ್ವಿನಿ 4x400ಮೀ ರಿಲೇಯಲ್ಲಿ ಕಂಚು ಹಾಗೂ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಬಿಂದುಶ್ರೀ.ಎಚ್.ರೈ 4x400ಮೀ ರಿಲೇಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.


ಪುರುಷರ ವಿಭಾಗದಲ್ಲಿ

ತೃತೀಯ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಭುವನ್‍ರಾಮ್ ಜಗದೀಶ್ ಭಂಡಾರಿ ಡೆಕಾತ್ಲಾನ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಅಂತಿಮ ವರ್ಷದ ಡಾಟಾ ಸೈನ್ಸ್ ವಿಭಾಗದ ಹರ್ಷಿತ್ ಮಹೇಶ್ ನಾಯ್ಕ್ ಹ್ಯಾಮರ್ ತ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಮತ್ತು ಅಂತಿಮ ವರ್ಷದ ಕಂಪ್ಯೂಟರ್ ವಿಭಾಗದ ಕಾರ್ತಿಕ್.ಆರ್ 110ಮೀ ಹರ್ಡಲ್ಸ್‍ನಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. 


ಕಾಲೇಜಿನ ತಂಡಕ್ಕೆ ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ.ಬಾಲಚಂದ್ರ ಗೌಡ ಭಾರ್ತಿಕುಮೇರು ತರಬೇತಿಯನ್ನು ನೀಡಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top