ವಿವೇಕಾನಂದ ಕಾಲೇಜಿನ ಸಪ್ತಪರ್ಣೋತ್ಸವದಿಂದ ಮೌಲ್ಯಗಳ ಉಳಿವು: ಪ್ರೊ. ಪಿ.ಎಲ್ ಧರ್ಮ

Upayuktha
0

  


ಪುತ್ತೂರು: ನಮ್ಮ ಸುತ್ತಲಿನ ಪರಿಸರವನ್ನು ಸಂರಕ್ಷಿಸುವ ಪ್ರತಿಜ್ಞೆ ಕೈಗೊಳ್ಳುವ ಕಾರ್ಯ ಪ್ರತಿ ಘಟಿಕೋತ್ಸವಗಳಲ್ಲಿ ಆಗಬೇಕು.ನಮ್ಮ ವಾತಾವರಣ ಒಳ್ಳೆಯದಾಗಿದ್ದರೆ ಮಾತ್ರ ಉಳಿದ ವಿಷಯಗಳಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ. ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜುಗಳ ಪಠ್ಯವಿಷಯಗಳ ಜೊತೆಗೆ ಅವುಗಳಿಗಿಂತ ಭಿನ್ನವಾದ ಸಾಮಾಜಿಕ ಮೌಲ್ಯಗಳ ಅರಿವಿನ ಅಗತ್ಯವಿದೆ. ಕಾಲಘಟ್ಟದಲ್ಲಿ ನಮ್ಮತನವನ್ನು ನಾವು ಉಳಿಸಿಕೊಳ್ಳಬೇಕಾದ್ದು ಅಗತ್ಯ. ಸಪ್ತಪರ್ಣೋತ್ಸವದ ಕಾರಣದಿಂದ ಮೌಲ್ಯಗಳ ಉಳಿವು ಆಗಬೇಕು ಎಂದು  ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ.ಎಲ್ ಧರ್ಮ ನುಡಿದರು.

 

ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ನಡೆದ  ೨೦೨೩-೨೦೨೪ ಹಾಗೂ ೨೦೨೪-೨೫ನೇ ಶೈಕ್ಷಣಿಕ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭ 'ಸಪ್ತಪರ್ಣೋತ್ಸವ'ವನ್ನು ಉದ್ಘಾಟಿಸಿ ಮಾತನಾಡಿದರು.

 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಕಾಲೇಜು ಶಿಕ್ಷಣ ಇಲಾಖೆ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಡಾ. ಕವಿತಾ ಕೆ.ಆರ್, ಪದವಿ ಪಡೆದ ತಕ್ಷಣ ಕಲಿಕೆ ಅಂತ್ಯವೆಂದಲ್ಲ. ಬದುಕಿನುದ್ದಕ್ಕೂ ನಾವು ಹೊಸತನ್ನು ಕಲಿಯುತ್ತಲೇ ಇರಬೇಕು. ಪರಿಸರದಿಂದ ನಾವು ಕಲಿಯುವುದು ಬಹಳಷ್ಟಿದೆ. ನಾವು ಜೀವನದಲ್ಲಿ ಅನೇಕ ವ್ಯಕ್ತಿಗಳನ್ನು ಭೇಟಿಯಾಗುತ್ತೇವೆ ಮತ್ತು ಬಹಳಷ್ಟು ಸ್ಥಳಗಳಿಗೂ ಹೋಗಿ ಅನುಭವ ಪಡೆಯುತ್ತೇವೆ. ಆದರೆ ನಮ್ಮ ಜೀವನದ ಗುರಿ ಉತ್ತಮ ಮೌಲ್ಯಗಳ ಪ್ರಸಾರ ಮಾಡುವುದಾಗಿರಬೇಕು ಎಂದರು.


ವಿವೇಕಾನಂದ
ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅಧ್ಯಕ್ಷೀಯ ನುಡಿಗಳನ್ನಾಡಿ ಸಮಾಜಕ್ಕಾಗಿ ನಾವು ಕೊಡುಗೆ ನೀಡಬೇಕು. ಪದವಿಯೊಂದಿಗೆ ಸಮಾಜಮುಖಿ ಚಿಂತನೆಯೂ ಅಗತ್ಯ. ಪದವಿಯ ನಂತರ ವಿದ್ಯಾರ್ಥಿಗಳಿಗೆ ಪ್ರಬುದ್ಧತೆ ಬರುತ್ತದೆ. ಆಗ ನಮ್ಮ ಸಮಸ್ಯೆಗಳಿಗೆ ನಾವೇ ಪರಿಹಾರಗಳನ್ನು ಕಂಡುಕೊಳ್ಳಬೇಕು ಎಂದರು.

 

2023-24 ಹಾಗೂ 2024-25ನೇ ಶೈಕ್ಷಣಿಕ ವರ್ಷದ ಪದವಿ ಹಾಗೂ ಸ್ನಾತಕೋತ್ತರ ಪದವಿಯ ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೂ ವಿವಿಧ ದತ್ತಿನಿಧಿ ಪ್ರಶಸ್ತಿಗಳನ್ನೂ ನೀಡಲಾಯಿತು.

 

ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಸ್ವಾಗತಿಸಿ,ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ಎಚ್.ಜಿ ಶ್ರೀಧರ್ ವಂದಿಸಿದರು. ಕಾಲೇಜಿನ ಆಡಳಿತ ವಿಭಾಗದ ವಿಶೇಷಾಧಿಕಾರಿ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ಹಾಗೂ ಸ್ನಾತಕೋತ್ತರ ವಿಭಾಗದ ಡೀನ್ ಡಾ. ವಿಜಯಸರಸ್ವತಿ. ಬಿ ನಿರ್ವಹಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)
To Top