ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಹಾಗೂ ಭಾರತೀಯ ರೆಡ್
ಕ್ರಾಸ್
ಸಂಸ್ಥೆ ಉಡುಪಿ ಜಿಲ್ಲಾ ಘಟಕ ಇವರ ಸಂಯುಕ್ತ
ಆಶ್ರಯದಲ್ಲಿ ವರನಟ ಡಾ.ರಾಜ್ಕುಮಾರ್
ರವರ ಜಯಂತಿ ಕಾರ್ಯಕ್ರಮವು ಏಪ್ರಿಲ್ 24 ರಂದು ಬೆಳಗ್ಗೆ 10.30 ಕ್ಕೆ
ನಗರದ ಬ್ರಹ್ಮಗಿರಿಯ ರೆಡ್ಕ್ರಾಸ್
ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ
ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು,
ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆ
ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ
ಹಾಗೂ ಬಿ.ವೈ ರಾಘವೇಂದ್ರ,
ಮಂಗಳೂರು ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್,
ಶಾಸಕರುಗಳಾದ ವಿ. ಸುನಿಲ್ ಕುಮಾರ್,
ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್
ಕೊಡ್ಗಿ ಹಾಗೂ ಗುರ್ಮೆ ಸುರೇಶ್
ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ,
ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ
ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಭಾರತೀಯ ರೆಡ್ಕ್ರಾಸ್
ರಾಜ್ಯ ಸಭಾಪತಿ ಬಸರೂರು ರಾಜೀವ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ
ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದು,
ಖ್ಯಾತ ಚಲನಚಿತ್ರ ನಟಿ ಪ್ರತಿಮಾ ನಾಯಕ್
ಉಪನ್ಯಾಸ ನೀಡಲಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


