ವಿವೇಕಾನಂದ ಕಾಲೇಜಿನ ಕವಿತಾ ಅವರಿಗೆ ಡಾಕ್ಟರೇಟ್ ಪದವಿ

Upayuktha
0



ಪುತ್ತೂರು: ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ  ರಾಜಕೀಯ ಶಾಸ್ತ್ರ ವಿಭಾಗದ ಉಪನ್ಯಾಸಕಿ ಕವಿತಾ ಅವರು ಮಂಗಳೂರು  ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ "Topic: "Agricultural policies - social response and it's implications in Karnataka- A Case Study Of Endosulfan In Dakshina Kannada" ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ದೊರೆತಿದೆ.


ಇವರು ಮಂಗಳೂರು ವಿಶ್ವವಿದ್ಯಾನಿಲಯದ ರಾಜಕೀಯ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ದಯಾನಂದ ನಾಯಕ್ ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮಂಡಿಸಿರುತ್ತಾರೆ.


ಇವರು ಸುಮಾರು 17ವರ್ಷಗಳಿಂದ ರಾಜ್ಯ ಶಾಸ್ತ್ರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದು ಕೊರಗಪ್ಪ ಮತ್ತು ವೆಂಕಮ್ಮ ದಂಪತಿಯ ಪುತ್ರಿಯಾಗಿದ್ದು ಮಂಗಳೂರಿನ ಶೈಲೇಶ್ ಕದ್ರಿ ಇವರ ಪತ್ನಿ. ಇವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top