ಶಿಕ್ಷಣದಲ್ಲಿ ನಿಮ್ಮ ಜಿಲ್ಲೆಯ ಸಾಧನೆ ಏನು?: ಪ್ರಿಯಾಂಕ್‌ ಕಾಲೆಳೆದ ಡಾ. ಭರತ್ ಶೆಟ್ಟಿ

Upayuktha
0


ಮಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಲ್ಬುರ್ಗಿ ಜಿಲ್ಲೆಗಳ ಸಾಧನೆ ಕುರಿತು ಶಾಸಕ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯನ್ನು ಸದಾ ಟೀಕಿಸುತ್ತಿರುವ ಪ್ರಿಯಾಂಕ ಖರ್ಗೆ ಇನ್ನಾದರೂ ತಮ್ಮ ಜಿಲ್ಲೆಯಲ್ಲಿ ಉಳಿದುಕೊಂಡು ಶಿಕ್ಷಣ ಕ್ಷೇತ್ರವನ್ನು ಮೇಲಕ್ಕೆತ್ತಲು ಶ್ರಮವಹಿಸಬೇಕು ಎಂದು ಭರತ್ ಶೆಟ್ಟಿ ಸಲಹೆ ನೀಡಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದರೆ, ಕಲ್ಬುರ್ಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂಬುದನ್ನು ಉಲ್ಲೇಖಿಸಿ, ಸಚಿವರ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಹಿಂದುಳಿದಿದೆ ಎಂದು ಟೀಕಿಸಿದ್ದಾರೆ.


ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ತಮ್ಮ ಜಿಲ್ಲೆಯ ಅಭಿವೃದ್ಧಿಯ ಕಡೆ ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಮುಂದಿದ್ದು, ಕಲ್ಬುರ್ಗಿ ಜಿಲ್ಲೆ ಇನ್ನೂ ಅನೇಕ ವಿಷಯಗಳಲ್ಲಿ ಹಿಂದೆ ಉಳಿದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದೇ ವೇಳೆ, ಐಟಿ ಸಚಿವರಾಗಿ ತಮ್ಮ ಜಿಲ್ಲೆಗೆ ನೀಡಿದ ಕೊಡುಗೆಗಳ ಬಗ್ಗೆ ಪ್ರಶ್ನೆ ಎತ್ತಿದ ಅವರು, ಜಿಲ್ಲೆಯ ಅಭಿವೃದ್ಧಿಯ ಮೂಲಕ ನಿಮ್ಮ ಸಾಮರ್ಥ್ಯ ತೋರಿಸಿ ಎಂದು ಸಲಹೆ ನೀಡಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top