‘25ನೇ ಯುವ ಸಾಂಸ್ಕೃತಿಕ ಉತ್ಸವ’ ಆಳ್ವಾಸ್ ತಾಂತ್ರಿಕ ಮಾಹಾವಿದ್ಯಾಲಯ ನಾಲ್ಕನೇ ಸ್ಥಾನ

Upayuktha
0

 160ಕ್ಕೂ ಹೆಚ್ಚು ತಾಂತ್ರಿಕ ಕಾಲೇಜುಗಳು ಭಾಗಿ

ಬೆಂಗಳೂರು: ಇಲ್ಲಿ ನಡೆದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ  ವ್ಯಾಪ್ತಿಗೆ ಒಳಪಟ್ಟ ಕಾಲೇಜುಗಳ ‘25ನೇ ಯುವ ಸಾಂಸ್ಕೃತಿಕ ಉತ್ಸವದಲ್ಲಿ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ ನಾಲ್ಕನೇ ಸ್ಥಾನ ಪಡೆಯಿತು.  


ರಾಜ್ಯದ ವಿವಿಧ ಭಾಗಗಳಿಂದ ಸುಮಾರು 160ಕ್ಕೂ ಹೆಚ್ಚು ತಾಂತ್ರಿಕ ಕಾಲೇಜುಗಳು ಭಾಗವಹಿಸಿದ್ದು, ವಿದ್ಯಾರ್ಥಿಗಳು ತಮ್ಮ ಸಾಂಸ್ಕೃತಿಕ ಪ್ರತಿಭೆಯನ್ನು ಅನಾವರಣಗೊಳಿಸಿದರು. ಉತ್ಸವದ ಅಂಗವಾಗಿ ಮೆರವಣಿಗೆ, ಸಂಗೀತ, ನಾಟಕ, ಕಲಾ ಸ್ಪರ್ಧೆಗಳು ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆಗಳು ನಡೆದವು.



ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಮೆರವಣಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಪೌರಾತ್ಯ ಸಂಗೀತದಲ್ಲಿ ದ್ವಿತೀಯ ಸ್ಥಾನ,  ಬೆಸ್ಟ್ ಔಟ್ ಆಫ್ ವೇಸ್ಟ್ನಲ್ಲಿ  ದ್ವಿತೀಯ ಸ್ಥಾನ,   ಕ್ಲೇ ಮಾಡೆಲಿಂಗ್ನಲ್ಲಿ ದ್ವಿತೀಯ ಸ್ಥಾನ,  ಏಕಾಂಕ ನಾಟಕಕ್ಕೆ ಕಂಚಿನ ಪದಕ ಪಡೆದರೆ,  ಕಿರು ಪ್ರಹಸನದಲ್ಲಿ ನಾಲ್ಕನೇ ಸ್ಥಾನ ಪಡೆದು ಸಮಗ್ರ ನಾಲ್ಕನೇ ಸ್ಥಾನ ಪಡೆಯಿತು.  ವಿದ್ಯಾರ್ಥಿಗಳನ್ನು ಡಾ ಎಂ ಮೋಹನ ಆಳ್ವ,  ಟ್ರಸ್ಟಿ ವಿವೇಕ್ ಆಳ್ವ  ಅಭಿನಂದಿಸಿದ್ದಾರೆ.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top