2023-24 ನೇ ಸಾಲಿನ ರ‍್ಯಾಂಕ್ ಘೋಷಣೆ- ಕಟೀಲ್ ಅಶೋಕ್ ಪೈ ಕಾಲೇಜಿನ 3 ವಿದ್ಯಾರ್ಥಿಗಳಿಗೆ ರ‍್ಯಾಂಕ್

Upayuktha
0

ಪ್ರಾರಂಭದಿಂದಲೂ ವಿಶ್ವವಿದ್ಯಾಲಯ ಮಟ್ಟದ ರ‍್ಯಾಂಕ್ಗಳನ್ನು ಗಳಿಸುತ್ತಿದ್ದು, ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ ಕಟೀಲ್ ಅಶೋಕ್ ಪೈ ಕಾಲೇಜು

                                                                                                                                                      

ಶಿವಮೊಗ್ಗ: ಇಲ್ಲಿನ ಮಾನಸ ಟ್ರಸ್ಟ್, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಭೂಮಿಕ ಎಲ್. 2023-24 ನೇ ಸಾಲಿನ ಸ್ನಾತಕೋತ್ತರ ಮನಃಶಾಸ್ತ್ರ (M.Sc Psychology) ಅಧ್ಯಯನ ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ ಮಟ್ಟದ ಪ್ರಥಮ ರ‍್ಯಾಂಕ್ ಹಾಗು ಹರ್ಷಿತ ವೈ. ಎಸ್. ದ್ವಿತೀಯ ರ‍್ಯಾಂಕ್ ಪಡೆದಿರುತ್ತಾರೆ.


ಇದೇ ಕಾಲೇಜಿನ ಬಿ.ಎಸ್.ಡಬ್ಲ್ಯೂ. ಪದವಿ ವಿದ್ಯಾರ್ಥಿನಿ ಪ್ರೀತಿ ಡಿ.  ನಾಲ್ಕನೇ ರ‍್ಯಾಂಕ್ ಗಳಿಸಿರುತ್ತಾರೆ. ಕುವೆಂಪು ವಿಶ್ವವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ವಿದ್ಯಾರ್ಥಿನಿಯರು ಪ್ರಶಸ್ತಿ ಪತ್ರವನ್ನು ಪಡೆಯಲಿದ್ದಾರೆ.


ಮಾನಸ ಟ್ರಸ್ಟ್ ನಿರ್ದೇಶಕಿ ಡಾ ರಜನಿ ಪೈ, ಶೈಕ್ಷಣಿಕ ನಿರ್ದೇಶಕರಾದ ಡಾ ಪ್ರೀತಿ ವಿ ಶಾನ್ಭಾಗ್, ಡಾ ವಾಮನ್ ಎಂ. ಶಾನ್ಭಾಗ್ ಹಾಗೂ ಡಾ. ರಾಜೇಂದ್ರ ಚೆನ್ನಿ, ಕಾಲೇಜಿನ ಆಡಳಿತಾಧಿಕಾರಿ, ಪ್ರೊ. ರಾಮಚಂದ್ರ ಬಾಳಿಗ, ಸ್ನಾತಕೋತ್ತರ ಮನಃಶಾಸ್ತ್ರ ವಿಭಾಗ ಮುಖ್ಯಸ್ಥೆ ಡಾ ಅರ್ಚನಾ ಭಟ್ ಕೆ ಹಾಗೂ ಅಧ್ಯಾಪಕರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.


ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಪ್ರಾರಂಭದಿಂದಲೂ ವಿಶ್ವವಿದ್ಯಾಲಯ ಮಟ್ಟದ ರ‍್ಯಾಂಕ್ಗಳನ್ನು ಗಳಿಸುತ್ತಿರುವುದು ಕಾಲೇಜಿನ ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ಒಂದು ಸಾಕ್ಷಿಯಾಗಿದೆ.

 

“35ನೇ ಘಟಿಕೋತ್ಸವದಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿನಿಯರು ವಿಶ್ವವಿದ್ಯಾಲಯದ ಘಟಿಕೋತ್ಸವ ವೇದಿಕೆಯಲ್ಲಿ ಪ್ರಶಸ್ತಿ ಪಡೆಯುತ್ತಿರುವುದು ಸಂಸ್ಥೆಗೆ ಹೆಮ್ಮೆಯನ್ನು ತಂದಿದೆ ಅವರಿಗೆ ಶುಭ ಹಾರೈಕೆಗಳು”

ಡಾ. ಸಂಧ್ಯಾಕಾವೇರಿ, ಪ್ರಾಂಶುಪಾಲರು

 

 ಸೈಕಾಲಜಿಸ್ಟ್ ಆಗುವ ಕನಸನ್ನು ತಾನು ಪ್ರೌಢಶಾಲಾ ವಿದ್ಯಾರ್ಥಿನಿಯಾಗಿದ್ದಾಗಲೇ ಕಂಡಿದ್ದೆ. ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ವಿದ್ಯಾರ್ಥಿಗಳಿಗೆ ಮಾನಸ ಸಂಸ್ಥೆಯ ಮೂಲಕ ದೊರಕುವ ಕ್ಲಿನಿಕಲ್ ಟ್ರೈನಿಂಗ್ ಸಂಶೋಧನಾ ಆಸಕ್ತಿಯನ್ನು ಹೆಚ್ಚಿಸುತ್ತದೆ”

ಭೂಮಿಕ ಎಲ್, ಪ್ರಥಮ ರ‍್ಯಾಂಕ್ ವಿಜೇತ ವಿದ್ಯಾರ್ಥಿನಿ


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top