ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ
ಉಡುಪಿ: ರಾಜ್ಯದಲ್ಲಿ ಯಾವುದೇ ಸಮಯದಲ್ಲಿ ಘೋಷಣೆಯಾಗಲಿರುವ ಎಸ್.ಐ.ಆರ್.
ಅಭಿಯಾನದಲ್ಲಿ ಪಕ್ಷದ ಬಿಎಲ್ಎ2 ಜವಾಬ್ದಾರಿ ಹೊಂದಿರುವ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಂಡು ಅರ್ಹ ಮತದಾರರ ಹೆಸರು
ಮತದಾರರ ಪಟ್ಟಿಯಲ್ಲಿ ತಪ್ಪಿ ಹೋಗದಂತೆ ನಿಗಾ ವಹಿಸಬೇಕು ಎಂದು
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಅವರು
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ
ತಂಡದ ಸಭೆಯ ಅಧ್ಯಕ್ಷತೆ ವಹಿಸಿ
ಮಾತನಾಡಿದರು.
ಪಂಚ
ರಾಜ್ಯಗಳ ಚುನಾವಣೆಯಲ್ಲಿ ಪಶ್ಚಿಮ ಬಂಗಾಲ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿಯ ಅಭೂತಪೂರ್ವ ಗೆಲುವನ್ನು ಅಭಿನಂದಿಸಿದ ಅವರು ಈ ಫಲಿತಾಂಶ
ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.
ರಾಜ್ಯ
ಕಂಡ ಧೀಮಂತ ನಾಯಕ, ಹಿರಿಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ
ಸಾರ್ವಜನಿಕ ಜೀವನದ 50 ಸಂವತ್ಸರಗಳ ಸಾರ್ಥಕ ಸೇವೆಯ ಸವಿ ನೆನಪಿಗಾಗಿ ಮೇ
9ರಂದು ಚಿತ್ರದುರ್ಗದಲ್ಲಿ ನಡೆಯುವ 'ಬಿ.ಎಸ್.ವೈ.
ಅಭಿಮಾನೋತ್ಸವ'ದ ಸಂಭ್ರಮದ ಕಾರ್ಯಕ್ರಮದಲ್ಲಿ
ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಕರೆ
ನೀಡಿದರು.
ಮಂಡಲ
ಪ್ರಶಿಕ್ಷಣ ವರ್ಗಗಳನ್ನು ಯಶಸ್ವಿಯಾಗಿ ಪೂರೈಸಿರುವ ಮತ್ತು ಮನ್ ಕೀ ಬಾತ್
ವೀಕ್ಷಣೆಯಲ್ಲಿ 100% ಪ್ರಗತಿ ದಾಖಲಿಸಿರುವ ಮಂಡಲಗಳನ್ನು ಅವರು ಅಭಿನಂದಿಸಿದರು.
ಪ್ರಶಿಕ್ಷಣ
ವರ್ಗದ ಮಂಗಳೂರು ವಿಭಾಗ ಸಂಚಾಲಕ ಕೆ.ಉದಯ ಕುಮಾರ್
ಶೆಟ್ಟಿ ಮಾತನಾಡಿ ಮೇ 23 ಮತ್ತು 24ರಂದು ನಡೆಯುವ ಜಿಲ್ಲಾ
ಮಟ್ಟದ ಪ್ರಶಿಕ್ಷಣ ವರ್ಗದಲ್ಲಿ ಎಲ್ಲಾ ಅಪೇಕ್ಷಿತರು ಕಡ್ಡಾಯವಾಗಿ ಭಾಗವಹಿಸಿ ಅಗತ್ಯ ಮಾಹಿತಿ ಮಾರ್ಗದರ್ಶನ ಪಡೆಯಬೇಕು ಎಂದರು.
ಜಿಲ್ಲಾ
ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿ, ಶ್ರೀಕಾಂತ್ ನಾಯಕ್ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಮಾಹಿತಿ ನೀಡಿದರು. ಜಿಲ್ಲಾ ಕಾರ್ಯದರ್ಶಿ ಶ್ರೀನಿಧಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಎಸ್.ಸಿ. ಮೋರ್ಚಾ
ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ ಡಿ.ಬಿ. ವಂದಿಸಿದರು.
ಪಕ್ಷದ
ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ರಾಜ್ಯ ಮೋರ್ಚಾ ಮತ್ತು ಪ್ರಕೋಷ್ಠಗಳ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾಗಳ ಹಾಗೂ ಮಂಡಲಗಳ ಅಧ್ಯಕ್ಷರು
ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


