ಅಕ್ಷಯ ಕಾಲೇಜು, ಪುತ್ತೂರು: ಸಾಫ್ಟ್ ಸ್ಕಿಲ್ಸ್ ಮಾಸ್ಟರಿ ಸೆಷನ್ ಯಶಸ್ವಿ

Upayuktha
0

 


 

ಪುತ್ತೂರು: ಇಲ್ಲಿನ ಅಕ್ಷಯ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ, ಬೈಟ್‌ಬ್ಲಿಟ್ಜ್ ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ “ಕ್ಲಾಸ್ ರೂಮ್‌ನಿಂದ ಉದ್ಯೋಗ ಜೀವನದತ್ತ – ಭವಿಷ್ಯಕ್ಕೆ ಸಿದ್ಧರಾಗಿ” ಎಂಬ ಆಶಯದೊಂದಿಗೆ ಸಾಫ್ಟ್ ಸ್ಕಿಲ್ಸ್ ಮಾಸ್ಟರಿ ಸೆಷನ್ ಕಾರ್ಯಕ್ರಮವು ಮೇ 8 ಮತ್ತು 9 ರಂದು ಯಶಸ್ವಿಯಾಗಿ ನಡೆಯಿತು.

 

ಕಾರ್ಯಕ್ರಮಕ್ಕೆ ವೃತ್ತಿಪರ ತರಬೇತುದಾರ ರಾಚ್ ಮಾನ್ಸಿಂಗ್ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಂವಹನ ಕೌಶಲ್ಯ, ವೃತ್ತಿಪರ ವ್ಯಕ್ತಿತ್ವ ವಿಕಾಸ, ಕ್ರಿಟಿಕಲ್ ಥಿಂಕಿಂಗ್, ತಂಡದ ಕೆಲಸ, ಭಾವನಾತ್ಮಕ ಬುದ್ಧಿಮತ್ತೆ ಹಾಗೂ ಉದ್ಯೋಗ ಸಿದ್ಧತೆ ಕುರಿತು ಉಪಯುಕ್ತ ಮಾಹಿತಿ ನೀಡಿದರು.

 

ಅವರು ವಿದ್ಯಾರ್ಥಿಗಳಿಗೆ ಕೇವಲ ಪದವಿ ಪಡೆಯುವುದಷ್ಟೇ ಸಾಕಾಗುವುದಿಲ್ಲ; ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸಲು ಆತ್ಮವಿಶ್ವಾಸ, ಪ್ರಾಯೋಗಿಕ ಜ್ಞಾನ ಹಾಗೂ ಉತ್ತಮ ಸಂವಹನ ಕೌಶಲ್ಯ ಅಗತ್ಯವೆಂದು ತಿಳಿಸಿದರು.

 

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ವೃತ್ತಿ ಅರಿವು ಹಾಗೂ ವ್ಯಕ್ತಿತ್ವ ವಿಕಾಸಕ್ಕೆ ಪ್ರೇರಣೆ ನೀಡಿತು. ಕಾಲೇಜಿನ ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಸಂಯೋಜಕರು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top