ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ “ಆರೋರಾ”ಡೈನಮಿಕ್ ಬಿಗಿನಿಂಗ್ 2026-27 ಶೈಕ್ಷಣಿಕ ವರ್ಷ ಆರಂಭ

Upayuktha
0

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅಕ್ಷಯ ಪದವಿಪೂರ್ವ ಕಾಲೇಜು ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷದ ಆರಂಭ "ಆರೋರ" ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಕ್ಷಯ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಜಯಂತ್ ನಡುಬೈಲು ರವರು ಮಾತನಾಡಿ ಪೋಷಕರು ಮಕ್ಕಳಿಗೆ ಸಂಪತ್ತನ್ನು ಮಾಡುವ ಬದಲಾಗಿ ಮಕ್ಕಳನ್ನೇ ಸರಿಯಾದ ವಿದ್ಯಾಭ್ಯಾಸ ನೀಡಿ ಅವರನ್ನು ಸಂಪತ್ತನಾಗಿ ರೂಪಿಸುವ ಜವಾಬ್ದಾರಿ ಪೋಷಕರು ಶಿಕ್ಷಕರು ಹಾಗೂ ಸಂಸ್ಥೆಯ ಮೇಲಿರುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉದಯೋನ್ಮುಖ ಯುವ ಪ್ರತಿಭೆ ಕುಮಾರಿ ಕನಿಷ್ಕ ಮನೋಜ್ ಕರ್ಕೆರ ಅವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದಾಗ ಮಾತ್ರ ನಾವು ಜೀವನದಲ್ಲಿ ಉನ್ನತ ಸ್ಥಾನವನ್ನು ಏರಲು ಸಾಧ್ಯ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದ ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಇವರು ಮಾತನಾಡುತ ನಮ್ಮ ಕಾಲೇಜಿನಲ್ಲಿ ಪದವಿ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿರುವ ಕೋರ್ಸ್ ಗಳು ಮತ್ತು ಅವಕಾಶಗಳ ಬಗ್ಗೆ ಪೋಷಕರಿಗೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಆಡಳಿತ ಅಧಿಕಾರಿಯಾದ ಅರ್ಪಿತ್ ಟಿ ಎ ರವರು ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಅಂಕಗಳ ಜೊತೆ ಅವರ ಕೌಶಲ್ಯವನ್ನು ಹೆಚ್ಚಿಸಿಕೊಂಡಾಗ ಮಾತ್ರ ಅವರು ಸುಲಭವಾಗಿ ಉದ್ಯೋಗವನ್ನು ಪಡೆಯಬಹುದು ಎಂದು ಸೂಚಿಸಿದರು.


ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲಯದ ಗಂಗರತ್ನ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತಿ ಕೆರಿಯರ್ ಡೆಸ್ಟಿನಿ ಮಂಗಳೂರು ಇದರ ಸ್ಥಾಪಕರಾದ ಜಯಶ್ರೀ ಉಪಸ್ಥಿತರಿದ್ದರು. ಉಪನ್ಯಾಸಕರಾದ ಭೂಮಿಕ ಬಿ ವಿ, ಸ್ವಾಗತಿಸಿ ನವನೀತ ಎಂ ವಂದಿಸಿ, ಪರಿಮಳ ರಾವ್ ನಿರೂಪಿಸಿದರು.ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನಿರ್ದೇಶಕರಾದ ಅಭಿಲಾಶ್ ಕ್ಷತ್ರಿಯರವರು ಹಾಗೂ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯಾರ್ಥಿಗಳಿಗೆ ಏವಿಯೇಷನ್ ಟ್ರೈನರ್ ಜಯಶ್ರೀರವರು ಓರಿಯಂಟೇಶನ್ ಕಾರ್ಯಕ್ರಮವನ್ನು ನಡೆಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top