ಆಳ್ವಾಸ್ ಪದವಿಪೂರ್ವ ಕಾಲೇಜು: ಎನ್‌ಡಿಎಯಲ್ಲಿ 24 ವಿದ್ಯಾರ್ಥಿಗಳು ಉತ್ತೀರ್ಣ

Upayuktha
0

 


ಮೂಡುಬಿದಿರೆ: ಕೇಂದ್ರದ ಲೋಕಸೇವಾ ಆಯೋಗದ ಮೂಲಕ ನಡೆಯುವ ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿ ಪರೀಕ್ಷೆಯಲ್ಲಿ  ಆಳ್ವಾಸ್ ಪದವಿಪೂರ್ವ ಕಾಲೇಜಿನ 24 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಗಮನ ಸೆಳೆದಿದ್ದಾರೆ


ಭಾರತೀಯ ಸೇನೆ, ನೌಕಾಪಡೆ ಹಾಗೂ ವಾಯುಪಡೆಯ ಅಧಿಕಾರಿಗಳಾಗಲು ಎನ್ಡಿಎ ಪ್ರಮುಖ ಘಟ್ಟವಾಗಿದ್ದು, ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಗೊಳಿಸುವ ಕಾರ್ಯವನ್ನು ಆಳ್ವಾಸ್  ಪದವಿಪೂರ್ವ ಕಾಲೇಜು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದೆ.


ವಿದ್ಯಾರ್ಥಿಗಳಾದ ವಿವೇಕ್ , ಅದ್ವೈತ್ ವಿಕ್ರಾಂತ್ ಶೆಂಡೆ, ಅಮೋಘ್ ನಾಗರಾಜ್ ಬಿಲ್ಲೂರ್, ಮೊಹಮ್ಮದ್ ಯೂಸುಫ್ ನಿಸಾರ್ ಶೇಖ್, ಸಾಯೀಶ್ ಪ್ರಶಾಂತ್ ತಾಳೇಕರ್, ಪ್ರಹ್ಲಾದ್ ದತ್ತ  ದೇಸಾಯಿ, ಸಂಹಿತ್ ವಿ ರಾವ್, ಹರ್ಷ ಎಂ, ಕೃತಿಕ್ ಬಿ, ಪ್ರಣವ್ ಎನ್ ಪಂಡಿತ್, ವಿಜಯಕುಮಾರ್ ಸಂಗಯ್ಯ ಚಿಕ್ಕಮಠ, ಪಿಯೂಷ್ ಎಚ್, ಶ್ರೇಯಸ್ ಸಿ ಕಬ್ಬಿನಕಂತಿಮಠ,  ಭರತೇಶ್ ನಾಗೇಶ್ ಮೊಗೇರ್, ಚಿನ್ಮಯ್ ಎಸ್, ಸಂಕೇತ್ ಭಟ್, ಸುಮಿತ್ ವಿ ಕೆ, ಹರ್ಷ ರೆಡ್ಡಿ, ಮೋಹಿತ್ ಕುಮಾರ್ ಜೆ,  ಅಕ್ಷಯ್ ಭಾರದ್ವಾಜ್, ಅನುಷ್ ಅರುಣ್ ಕೆ, ಪಿಯೂಷ್ ಎಚ್, ವಿಸ್ಮಯ್ ನಾರಾಯಣ್ ನಾಡಿಗ್, ಮೆಲ್ರಾಯ್ ಕ್ಯಾಸ್ಟೆಲಿನೋ, ಇಶಾನ ಉತ್ತೀರ್ಣರಾಗಿದ್ದಾರೆ.



ಆಳ್ವಾಸ್ನಲ್ಲಿ ಎನ್ಡಿಎ ಪರೀಕ್ಷೇಗಾಗಿ ವಿಶೇಷ ತರಬೇತಿ


ಆಳ್ವಾಸ್
ನಲ್ಲಿ ಎನ್ಡಿಎ ತರಬೇತಿಗೆ ವಿಶೇಷ ಮಹತ್ವ ನೀಡಲಾಗುತ್ತಿದ್ದು, ಇಲ್ಲಿ ವಿದ್ಯಾರ್ಥಿಗಳಿಗೆ ಪಿಯು ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯನ್ನೂ ಸಮನ್ವಯಗೊಳಿಸಲಾಗಿದೆ. ಎನ್ಡಿಎ ಪರೀಕ್ಷೆಯ ಗಣಿತ, ಸಾಮಾನ್ಯ ಜ್ಞಾನ, ಇಂಗ್ಲಿಷ್ ಹಾಗೂ ತಾರ್ಕಿಕ ಚಿಂತನೆ ವಿಭಾಗಗಳಿಗೆ ಅನುಭವಸಂಪನ್ನ ಉಪನ್ಯಾಸಕರು ತರಬೇತಿ ನೀಡುತ್ತಾರೆ. ನಿಯಮಿತ ಮಾಕ್ ಟೆಸ್ಟ್ಗಳು, ಪ್ರಶ್ನಾಪತ್ರಿಕೆ ವಿಶ್ಲೇಷಣೆ, ಸಮಯ ನಿರ್ವಹಣೆ ಹಾಗೂ ವೈಯಕ್ತಿಕ ಮಾರ್ಗದರ್ಶನ ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ.  ವಿದ್ಯಾರ್ಥಿಗಳ ದೈಹಿಕ ಕ್ಷಮತೆಯನ್ನು ವೃದ್ಧಿಸಲು ನಿಯಮಿತ ವ್ಯಾಯಾಮ, ಪೆರೇಡ್ ತರಬೇತಿ ಮತ್ತು ಕ್ರೀಡಾ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುತ್ತದೆ.


ಆಳ್ವಾಸ್ ಶಿಕ್ಷಣ ಸಂಸ್ಥೆ ಎನ್ಡಿಎ ಕನಸು ಕಾಣುವ ವಿದ್ಯಾರ್ಥಿಗಳಿಗೆ ಸಮಗ್ರ ಮಾರ್ಗದರ್ಶನ ಮತ್ತು ಅತ್ಯುತ್ತಮ ತರಬೇತಿ ನೀಡುವ ಮೂಲಕ ರಾಷ್ಟ್ರ ಸೇವೆಗೆ ಯೋಗ್ಯ ಯುವಕರನ್ನು ರೂಪಿಸುತ್ತಿದೆ.


ಸಾಧಕ  ವಿದ್ಯಾರ್ಥಿಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ, ಪ್ರಾಚಾರ್ಯ ಪ್ರೋ ಮೊಹಮ್ಮದ್ ಸದಾಕತ್, ಸಂಯೋಜಕ ವರುಣ್ ಪ್ರಭು ಶ್ಲಾಘಿಸಿದ್ದಾರೆ


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top