ಥ್ರೋಬಾಲ್: 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

Upayuktha
0

 


ಮೂಡುಬಿದಿರೆ: ಮಂಗಳೂರು ವಿವಿ ಕ್ಯಾಂಪಸ್ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಅದ್ಭುತ ಪ್ರದರ್ಶನ ನೀಡಿ 21ನೇ ಬಾರಿ ಚಾಂಪಿಯನ್ ಕಿರೀಟವನ್ನು ಮುಡಿಗೇರಿಸಿಕೊಂಡು, ಪೂರ್ಣಪ್ರಜ್ಞಾ ರೋಲಿಂಗ್ ಟ್ರೋಪಿಯನ್ನು ತನ್ನದಾಗಿಸಿಕೊಂಡರು.    


ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ತಂಡವನ್ನು ಆಳ್ವಾಸ್ ತಂಡವು 25-10 ಹಾಗೂ 25-12 ಅಂಕಗಳ ನೇರ ಸೆಟ್ನಲ್ಲಿ ಮಣಿಸಿತು. ಸೆಮಿಫೈನಲ್ನಲ್ಲಿ ಹಂಪನಕಟ್ಟೆಯ  ವಿಶ್ವವಿದ್ಯಾಲಯ ಕಾಲೇಜಿನ ವಿರುದ್ಧ 25-18 ಹಾಗೂ 25-12 ಅಂಕಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿತು.


ಅಂತಿಮ ಫೈನಲ್ ಹಣಾಹಣಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಕ್ಯಾಂಪಸ್ ತಂಡವನ್ನು 25-18 ಮತ್ತು 25-16 ಅಂಕಗಳ ನೇರ ಸೆಟ್ನಿಂದ ಸೋಲಿಸಿ ಆಳ್ವಾಸ್ ಚಾಂಪಿಯನ್ಶಿಪ್ ಕಿರೀಟವನ್ನು  18ನೇ ಬಾರಿ ತನ್ನದಾಗಿಸಿಕೊಂಡಿತು.


ವಿಜೇತ ತಂಡವನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top