ಉಪಯುಕ್ತ ನ್ಯೂಸ್ ಬಳಗದ ಉಸ್ತುವಾರಿ ಸಂಪಾದಕರಾಗಿ ಅನನ್ಯ ಭಟ್ ನಿಯುಕ್ತಿ

Upayuktha
0


ಮಂಗಳೂರು: ಉಪಯುಕ್ತ ನ್ಯೂಸ್ ಡಿಜಿಟಲ್ ಮಾಧ್ಯಮ ಬಳಗದ ಉಸ್ತುವಾರಿ ಸಂಪಾದಕರಾಗಿ ಮಾಧ್ಯಮ ಕ್ಷೇತ್ರದ ಉದಯೋನ್ಮುಖ ಪ್ರತಿಭೆ ಕು. ಅನನ್ಯ ಭಟ್ ಕೆ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಈ ನೇಮಕ ತಕ್ಷಣದಿಂದಲೇ ಜಾರಿಗೆ ಬಂದಿದೆ.


ಉಪಯುಕ್ತ ನ್ಯೂಸ್ ಬಳಗದ ಸಂಸ್ಥಾಪಕರು ಹಾಗೂ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ಪತ್ರಕರ್ತ ಶ್ರೀ ಚಂದ್ರಶೇಖರ ಕುಳಮರ್ವ ಅವರು ಕನ್ನಡದ ಪ್ರತಿಷ್ಠಿತ ವೈಚಾರಿಕ ನಿಯತಕಾಲಿಕ ವಿಕ್ರಮ ವಾರಪತ್ರಿಕೆಯ ಸಂಪಾದಕರಾಗಿ ಕರ್ತವ್ಯವನ್ನು ವಹಿಸಿಕೊಂಡಿರುವುದರಿಂದ ಈ ಬದಲಾವಣೆ ಮಾಡಲಾಗಿದೆ.


ಅನನ್ಯ ಭಟ್ ಪ್ರಸ್ತುತ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಜೆಎಂಸಿ ಪ್ರಥಮ ವರ್ಷದ ವಿದ್ಯಾರ್ಥಿನಿಯಾಗಿದ್ದಾರೆ. ಶೈಕ್ಷಣಿಕ ಕಾರ್ಯ ಚಟುವಟಿಕೆಗಳ ಜತೆಗೆ ಉಪಯುಕ್ತ ನ್ಯೂಸ್ ಬಳಗದ ಸಂಪಾದಕೀಯ ವಿಭಾಗದ ಹೊಣೆಗಾರಿಕೆಯನ್ನೂ ನಿಭಾಯಿಸಲಿದ್ದಾರೆ.


ಉಪಯುಕ್ತ ನ್ಯೂಸ್ ಬಳಗದಲ್ಲಿ ಉಪಸಂಪಾದಕರಾಗಿ ಕುಮಟಾದ ಸೌಮ್ಯ ಆರ್ ಹಾಗೂ ಕಾರ್ಕಳದ ಸುವರ್ಚಲಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top