ಮಂಗಳೂರು: ಜಿಲ್ಲಾಧಿಕಾರಿ ಕಚೇರಿಗೆ ಆಂಧ್ರ ರಾಜ್ಯಪಾಲರ ಭೇಟಿ

Upayuktha
0

ಮಂಗಳೂರು: ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಝೀರ್   ಅವರು  ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಆಂಧ್ರ ಪ್ರದೇಶದ  ರಾಜ್ಯಪಾಲರನ್ನು  ಸ್ವಾಗತಿಸಿದರು.


ಜಿಲ್ಲಾಧಿಕಾರಿ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು  ಹೊಸ ಕಚೇರಿಯ ನಿರ್ಮಾಣ ಹಾಗೂ ಶೈಲಿಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕೊಠಡಿಯಲ್ಲಿದ್ದ  ಜಿಲ್ಲೆಯಲ್ಲಿ ಆಡಳಿತ ನಡೆಸಿದ ಜಿಲ್ಲಾಧಿಕಾರಿಗಳ ಪಟ್ಟಿಯನ್ನು ವೀಕ್ಷಿಸಿದರು.




ಜಿಲ್ಲಾಧಿಕಾರಿಗಳು ರಾಜ್ಯಪಾಲರಿಗೆ ಯಕ್ಷಗಾನ ಶೈಲಿಯ ಸ್ಮರಣಿಕೆ ನೀಡಿ ಗೌರವಿಸಿದರು. ಆಂಧ್ರಪ್ರದೇಶದ ರಾಜ್ಯಪಾಲರ ಭೇಟಿ ಪ್ರಯುಕ್ತ  ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.


ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು.ಕೆ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top