ಉಡುಪಿ:
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ವತಿಯಿಂದ ಪ್ರಸಕ್ತ ಸಾಲಿನಲ್ಲಿ ಡಿ.ಎಎಲ್.ಇಡಿ
ಕೋರ್ಸುಗಳ ಸರಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್ಲೈನ್ ಮೂಲಕ ಜೂನ್ 1 ರ
ವರೆಗೆ ಅರ್ಜಿ ಆಹ್ವಾನಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ವೆಬ್ಸೈಟ್ ನಲ್ಲಿ ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ ಶುಲ್ಕದ ವಿವರಗಳು ಹಾಗೂ ಜಿಲ್ಲಾವಾರು ಶಿಕ್ಷಣ
ಸಂಸ್ಥೆಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಅಧಿಸೂಚನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ
ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಕೇಂದ್ರಗಳಲ್ಲಿ ಅಂತಿಮ ದಿನಾಂಕದ ಒಳಗಾಗಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೀಪಾ ಶೆಟ್ಟಿ ಹೆಚ್,
ಡಯಟ್ ಉಪನ್ಯಾಸಕರು, ಮೊ.ನಂ: 9591475489 ಅನ್ನು
ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ
ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


