ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ: ಅರ್ಜಿ ಆಹ್ವಾನ

Upayuktha
0

 


ಮಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇ.90% ಕ್ಕಿಂತ ಹೆಚ್ಚಿನ ಅಂಕ ಪಡೆದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.  

ಆನ್‍ಲೈನ್ ಅರ್ಜಿ ಸಲ್ಲಿಸಲು ವಿಧಾನ ಹಾಗೂ ಅಗತ್ಯ ಮಾಹಿತಿಗೆ ಕೆ.ಎಸ್.ಜಿ.. ನ್ಯೂಸ್ ಯೂಟ್ಯೂಬ್ ಚಾನಲ್‍ಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಸಲು ಮೇ 25 ಕೊನೆಯ ದಿನ. ವಿದ್ಯಾರ್ಥಿಯು 2026 ಎಸ್.ಎಸ್.ಎಲ್.ಸಿ /ಪಿ.ಯು.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪಾಸ್ ಆಗಿರಬೇಕು. ವಿದ್ಯಾರ್ಥಿಯ ತಂದೆ/ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರಾಗಿ ಸೇವೆ  ಸಲ್ಲಿಸುತ್ತಿರಬೇಕು.

ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವವಿದ್ಯಾನಿಲಯಗಳು ಹಾಗೂ ಅಥವಾ  ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಮಕ್ಕಳಿಗೆ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.  


ಆನ್‍ಲೈನ್ ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು:

ಇಲಾಖೆಯ ಸೇವಾ ದೃಢೀಕರಣ ಪತ್ರ, ವಿದ್ಯಾರ್ಥಿಯ ಪಾಸ್‍ಪೋರ್ಟ್ ಭಾವಚಿತ್ರ ಮತ್ತು ದೃಢೀಕೃತ ಅಂಕಪಟ್ಟಿ, ಸಂಘದ ಜಿಲ್ಲಾ/ತಾಲ್ಲೂಕು/ಯೋಜನಾ ಶಾಖೆ ಅಧ್ಯಕ್ಷರು/ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರ (ಕೆ.ಎಸ್.ಜಿ.. ನ್ಯೂಸ್ ಬ್ಲಾಗ್‍ನಲ್ಲಿ ಪಿ.ಡಿ.ಎಫ್  ಫೈಲ್ ಲಭ್ಯವಿದೆ).

ಮೇಲ್ಕಂಡ ಲಗತ್ತುಗಳನ್ನು ನಿಗದಿಸಿ ಜೆ.ಪಿ.ಜಿ ಫಾರ್ಮೇಟ್‍ನಲ್ಲಿ (1 ಎಂ.ಬಿ ಮೀರದಂತೆ) ಅಪ್‍ಲೋಡ್ ಮಾಡಬೇಕು. ಅರ್ಜಿ ಸಲ್ಲಿಕೆ ಯಶಸ್ವಿಗೊಂಡ ನಂತರ ನೊಂದಾಯಿತ  -ಮೇಲ್ ಸ್ವೀಕೃತಿ ರವಾನೆಯಾಗಲಿದೆ.  ಶೇಕಡಾವಾರು ಅಂಕಗಳನ್ನು ನಿರ್ಧರಿಸಿ ಅರ್ಜಿಯನ್ನು ಪರಿಗಣಿಸುವ ನಿರ್ಧಾರ ಸಂಘದ್ದಾಗಿರುತ್ತದೆ ಎಂದು   ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top