“ಅವಿಶ್ರಾಂತ ಧ್ಯೇಯಜೀವಿ”: ಡಾ. ಮೈ. ಚ. ಜಯದೇವ ಅವರ ಸಂಸ್ಮರಣಾ ಕೃತಿ ಮೇ 14ರಂದು ಲೋಕಾರ್ಪಣೆ

Upayuktha
0





ಬೆಂಗಳೂರು, ಮೇ 10: ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಖ್ಯಾತ ಚಿಂತಕ ಮತ್ತು ಲೇಖಕ ಡಾ. ಮೈ. ಚ. ಜಯದೇವ ಅವರ ಕೃತಿಯಾದ “ಅವಿಶ್ರಾಂತ ಧ್ಯೇಯಜೀವಿ” ಪುಸ್ತಕದ ಲೋಕಾರ್ಪಣ  ಕಾರ್ಯಕ್ರಮವು ಮೇ 14, 2026 ರಂದು ಸಂಜೆ 6.30ಕ್ಕೆ ಬೆಂಗಳೂರಿನಲ್ಲಿ ನಡೆಯಲಿದೆ.


ನಗರದ ನ್ಯಾಷನಲ್ ಕಾಲೇಜು ಪುರಭವನ (ಟೌನ್ ಹಾಲ್)ದಲ್ಲಿ ಆಯೋಜಿಸಲಿರುವ ಈ ಕಾರ್ಯಕ್ರಮಕ್ಕೆ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದು, ಅವರು ಆಶೀರ್ವಚನ ನೀಡಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದತ್ತಾತ್ರೇಯ ಹೊಸಬಾಳೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ|| ಬಾಬು ಕೃಷ್ಣಮೂರ್ತಿ ಹಾಗೂ ಶ್ರೀ ಬೇಳೂರು ಸುದರ್ಶನ ಉಪಸ್ಥಿತರಿದ್ದು, ಪುಸ್ತಕದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ರಾಷ್ಟ್ರೋತ್ಥಾನ ಪರಿಷತ್ ಅಧ್ಯಕ್ಷರಾದ ಎಂ. ಪಿ. ಕುಮಾರ್ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.


ಡಾ. ಮೈ. ಚ. ಜಯದೇವ (1932–2017) ಅವರು ರಾಷ್ಟ್ರೋತ್ಥಾನ ಪರಿಷತ್ತಿನ ಸ್ಥಾಪಕರಾಗಿ, ಶಿಕ್ಷಣ ಮತ್ತು ಸಂಸ್ಕೃತಿ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ ಮಹನೀಯರು. ಅವರ ಜೀವನ ಮತ್ತು ಸಾಧನೆಗಳನ್ನು ಒಳಗೊಂಡಿರುವ ಈ ಕೃತಿ, ಸಮಾಜಮುಖಿ ಚಿಂತನೆಗಳಿಗೆ ದಾರಿ ತೋರಿಸುವ ಮಹತ್ವದ ಗ್ರಂಥವೆಂದು ಪರಿಗಣಿಸಲಾಗಿದೆ.


ಶ್ರೀ ಮೈ. ಚ. ಜಯದೇವ ಅವರು ರಾಷ್ಟೋತ್ಥಾನ ಪರಿಷತ್ತನ್ನು ಆರಂಭದ ದಿನಗಳಿಂದಲೂ (1965) ಕಟ್ಟಿ ಬೆಳೆಸಿದವರು. ವ್ಯವಸ್ಥಾಕುಶಲರೂ, ಅಸಾಮಾನ್ಯ ದಕ್ಷರೂ, ಸಂಘಟನೆಯ ರೂವಾರಿಗಳೂ ಆಗಿ ಒಂದು ಜೀವನ, ಒಂದು ಧ್ಯೇಯಾನುಸಂಧಾನ ಎಂಬ ಸೂತ್ರವನ್ನು ಜೀವನದುದ್ದಕ್ಕೂ ಪಾಲಿಸುತ್ತ ತಮ್ಮ ದೂರದರ್ಶಿ ಚಿಂತನೆ, ರಾಷ್ಟ್ರನಿಷ್ಠ ಕರ್ತವ್ಯಪ್ರಜ್ಞೆ, ಕಠಿಣ ಪರಿಶ್ರಮದ ಮೂಲಕ ಸ್ವಸ್ಥ ಸಮಾಜ ನಿರ್ಮಾಣದ ವಿವಿಧ ಕ್ಷೇತ್ರಗಳಲ್ಲಿ ರಾಷ್ಟೋತ್ಥಾನ ಪರಿಷತ್ತು ಸ್ಥಿರ ಹೆಜ್ಜೆಗಳನ್ನಿಟ್ಟು ಮುನ್ನಡೆಯಲು ಕಾರಣೀಭೂತರಾದರು.


ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಗಳೂರು ಮಹಾನಗರ ಕಾರ್ಯವಾಹ, ಪ್ರಾಂತ ಕಾರ್ಯವಾಹ, ಕ್ಷೇತ್ರೀಯ ಕಾರ್ಯವಾಹ, ಕ್ಷೇತ್ರೀಯ ಪ್ರಚಾರಕ, ಅಖಿಲ ಭಾರತೀಯ ಕಾರ್ಯಕಾರಿಣಿಯ ಆಮಂತ್ರಿತ ಸದಸ್ಯರು- ಹೀಗೆ 5 ದಶಕಗಳಿಗೂ ಹೆಚ್ಚು ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘದ ಬೇರುಗಳನ್ನು ಗಟ್ಟಿಗೊಳಿಸಿದವರು. ಮಿಥಿಕ್ ಸೊಸೈಟಿ, ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಅಮೃತ ಶಿಶುನಿವಾಸ, ಅಬಲಾಶ್ರಮ- ಹೀಗೆ ಬೆಂಗಳೂರಿನ ಅನೇಕ ಸಾಮಾಜಿಕ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿ ನಿಂತವರು. ಈ ಎಲ್ಲ ಸಂಸ್ಥೆಗಳು ಮೂಲೋದ್ದೇಶದಂತೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಪ್ರೇರಣೆ ನೀಡುವುದರ ಜೊತೆ ಜೊತೆಗೆ ಅಗತ್ಯ ವ್ಯವಸ್ಥೆ-ವ್ಯಕ್ತಿ ಜೋಡಣೆಯಂತಹ ಕೆಲಸಗಳನ್ನೂ ತೆರೆಯ ಹಿಂದೆ ನಿಂತು ಮಾಡಿದವರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top