ಬಿ.ಜೆ. ಅನಂತಪದ್ಮನಾಭರಾವ್‌ “ಕರುನಾಡ ಕನ್ನಡ ಕಣ್ಮಣಿ” ರಾಜ್ಯ ಪ್ರಶಸ್ತಿಗೆ ಆಯ್ಕೆ

Upayuktha
0

 


ದಾವಣಗೆರೆ: ಇಲ್ಲಿನ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಪ್ರತೀ ವರ್ಷದಂತೆ ವರ್ಷವೂ 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ಬಿ.ಜೆ.ಅನಂತಪದ್ಮನಾಭರಾವ್ರವನ್ನುಕರುನಾಡ ಕನ್ನಡ ಕಣ್ಮಣಿರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್ ತಿಳಿಸಿದ್ದಾರೆ.

 

ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಕಠಿಣ ಪರಿಶ್ರಮದಿಂದ ಮೂರುವರೆ ದಶಕಗಳಿಂದ ರೈತರಾಗಿ, ಪತ್ರಕರ್ತರಾಗಿ, ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಅಯ್ಕೆ ಮಾಡಲಾಗಿದೆ ಎಂದು ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಪ್ರಕಟಿಸಿದ್ದಾರೆ.

 

ಯಾವುದೇ ಜಾತಿ, ಮತ, ಬೇಧವಿಲ್ಲದೆ ಕಳೆದ 25 ವರ್ಷಗಳಿಂದಪವಮಾನ ಪ್ರತಿಷ್ಥಾನಸ್ಥಾಪನೆ ಮಾಡಿ ಇತ್ತೀಚಿಗೆ ಹಿರಿಯ ನಾಗರೀಕರ ದಂಪತಿಗಳಿಗೆಆದರ್ಶ ದಂಪತಿಪ್ರಶಸ್ತಿ ನೀಡಿ ಗೌರವಿಸಿದರು. ಕಲಾಕುಂಚ ಮತ್ತು ಪವಮಾನ ಪ್ರತಿಷ್ಥಾನದ ಸರ್ವ ಸದಸ್ಯರು, ಪದಾಧಿಕಾರಿಗಳು ಬಿ.ಜೆ.ಅನಂತಪದ್ಮನಾಭರಾವ್ ರವರಿಗೆ ಅಭಿಮಾನದಿಂದ ಅಭಿನಂದಿಸಿದ್ದಾರೆ ಎಂದು ಕಲಾಕುಂಚದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಶುಭ ಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top