ಸರಕಾರಿ ಶಾಲೆಗಳ ಉಚಿತ ಶಿಕ್ಷಣದ ಪ್ರಯೋಜನ ಪಡೆಯಿರಿ

Upayuktha
0

ಸುರತ್ಕಲ್: ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಮತ್ತು ಖಚಿತ ಗುಣಮಟ್ಟದ ಶಿಕ್ಷಣ ದೊರಕುತ್ತಿದ್ದು ಪೋಷಕರು ಇದರ ಪ್ರಯೋಜನ ಪಡೆಯಬೇಕೆಂದು ಹಿರಿಯ ನಿವೃತ್ತ ಶಿಕ್ಷಕಿ ಪುಷ್ಪಾವತಿ ಶ್ರೀನಿವಾಸ ರಾವ್ ನುಡಿದರು. ಅವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಳಾಯಿ ಫಿಶರೀಶ್ ಚಿತ್ರಾಪುರದಲ್ಲಿ ಶಾಲಾ ದಾಖಲಾತಿ ಆಂದೋಲನ ಹಾಗೂ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.


ಕೂಳೂರು ಮೊಗವೀರ ಮಹಾಸಭಾದ ಅಧ್ಯಕ್ಷ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಭರತ್ ಕುಮಾರ್ ಮಾತನಾಡಿ, ಕನ್ನಡ ಇಂಗ್ಲೀಷ್ ಮಾಧ್ಯಮದ ಕಲಿಕೆಯ ಅವಕಾಶ ಶಾಲೆಯಲ್ಲಿ ಲಭ್ಯವಾಗುತ್ತಿರುವುದು ಸ್ವಾಗತಾರ್ಹ ಎಂದರು.


ಪಣಂಬೂರು ಮೊಗವೀರ ಮಹಾ ಸಭಾದ ಅಧ್ಯಕ್ಷ ಹಾಗೂ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾಧವ ಸುವರ್ಣರು ವಿವಿಧ ಸೌಲಭ್ಯಗಳು ಸರ್ಕಾರ ಹಾಗೂ ದಾನಿಗಳ ನೆರವಿನಿಂದ ಲಭ್ಯವಾಗುತ್ತಿದ್ದು ಶಾಲೆ ಉತ್ತಮ ವಿದ್ಯಾರ್ಥಿಗಳನ್ನು ರೂಪಿಸುತ್ತಿದೆ ಎಂದರು.


ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರೊ. ಕೃಷ್ಣಮೂರ್ತಿ ಮಾತನಾಡಿ ಆಧುನಿಕ ಕಲಿಕಾ ಸೌಲಭ್ಯಗಳೊಂದಿಗೆ ಸೃಜನಾತ್ಮಕ ಕಲಿಕೆಯ ವಾತಾವರಣವನ್ನು ಶಾಲೆಯಲ್ಲಿ ಕಲ್ಪಿಸಿಕೊಡಲಾಗುತ್ತಿದೆ ಎಂದರು.


ಹಳೆ ವಿದ್ಯಾರ್ಥಿ ಸಂಘದ ಜೊತೆಕಾರ್ಯದರ್ಶಿ ಕುಮಾರ ಬಂಗೇರ, ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷೆ ಶಶಿಕಲಾ ಮತ್ತು ಶ್ರೀನಿವಾಸ ರಾವ್ ಶುಭ ಹಾರೈಸಿದರು.


ಶಿಕ್ಷಕಿಯರಾದ ಸಿಂತಿಯ, ನೀತಾ ತಂತ್ರಿ, ರೂಪ, ಮತ್ತು ಪೋಷಕರು, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಶೋಭಾ ಸ್ವಾಗತಿಸಿದರು.ಹಿರಿಯ ಶಿಕ್ಷಕಿ ಸುಕೇಶಿನಿ ವಂದಿಸಿದರು.


ಜಾಥಾ ಸಂದರ್ಭದಲ್ಲಿ ಮನೆಗಳಿಗೆ ಭೇಟಿ ನೀಡಿ ಶಾಲಾ ದಾಖಲಾತಿಯ ಕುರಿತು ಮಾಹಿತಿ ನೀಡಿ ಮಾಹಿತಿ ಪತ್ರಗಳನ್ನು ವಿತರಿಸಲಾಯಿತು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top