ಕುತ್ಲೂರು ಸರಕಾರಿ ಶಾಲಾ ಮಕ್ಕಳಿಗೆ ಬಿಎಎಸ್ಎಫ್ ಸಂಸ್ಥೆಯಿಂದ ಪುಸ್ತಕ ಸಾಮಗ್ರಿ ಕೊಡುಗೆ

Upayuktha
0

 


 

ಮಂಗಳೂರು: ಬೆಳ್ತಂಗಡಿ ತಾಲೂಕಿನ ಕುತ್ಲೂರು ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬಿಎಎಸ್ಎಫ್  ಸಿಎಸ್ ಆರ್ ನಿಧಿಯಿಂದ ನೀಡಲಾದ 50 ಸಾವಿರ ರೂಪಾಯಿ ಮೌಲ್ಯದ ಪುಸ್ತಕ ಸಾಮಾಗ್ರಿ ಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿನಾಯಕ ನರ್ವಾಡೆ ಶಾಲಾ ಮಕ್ಕಳಿಗೆ ಹಸ್ತಾಂತರಿಸಿದರು.

 

ವೇಳೆ ಮಾತನಾಡಿದ ಅವರು ಸರಕಾರಿ ಶಾಲೆಯ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ಸಹಕಾರ ಅತೀ ಅಗತ್ಯವಾಗಿದೆ. ಕುತ್ಲೂರು ಸರಕಾರಿ ಶಾಲೆಯಲ್ಲಿ ಎಲ್ ಕೆ ಜಿ ಹಾಗೂ ಯು ಕೆ ಜಿ ತರಗತಿ ಆರಂಭಿಸಲು ಅಗತ್ಯವಿರುವ ಕೊಠಡಿ ನಿರ್ಮಾಣ  ಸೇರಿದಂತೆ ಶಾಲೆಯ ಅಭಿವೃದ್ಧಿಗೆ ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು.

 

ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಸಂವಾದ ನಡೆಸಿದರು.

 

ಕಾರ್ಯಕ್ರಮದಲ್ಲಿ  ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಬಿಎಎಸ್ಎಫ್ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಎಸ್ಡಿಎಂಸಿ ಅಧ್ಯಕ್ಷ ಕನಕವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ ಮಾರ್ದೊಟ್ಟು, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಆಶಾಲತಾ, ಗಾಯತ್ರಿ, ಹರ್ಷಿತ್, ಅಮೃತ್ ಕುಮಾರ್ ಪುಟಾಣಿಗಳ ಸಾಹಿತ್ಯ, ಹೃಷಿಕ್, ಹರ್ಷ್, ಅಧ್ವಿನ್ ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top