ಸಂತ ಫಿಲೋಮಿನಾ ಕಾಲೇಜಿನಲ್ಲಿ ಫಾರ್ಮಾಸ್ಯೂಟಿಕಲ್ ಕೆಮಿಸ್ಟ್ರಿ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ

Upayuktha
0

 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

 


ಪುತ್ತೂರು: ಇಲ್ಲಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಫಾರ್ಮಾಸ್ಯೂಟಿಕಲ್ ಕೆಮಿಸ್ಟ್ರಿ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ ಸಮಾರಂಭ ಸೋಮವಾರ ನಡೆಯಿತು.

 

ಕಾಲೇಜಿನ ಪ್ರಾಂಶುಪಾಲ ರೆ.ಡಾ. ಆಂಥೋನಿ ಪ್ರಕಾಶ್ ಮಾಂಥೆರೋ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಜ್ಞಾನ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉದ್ಯಮಾಧಾರಿತ ಶಿಕ್ಷಣ ಮತ್ತು ಪ್ರಾಯೋಗಿಕ ಅನುಭವದ ಮಹತ್ವವನ್ನು ವಿವರಿಸಿದರು.

 


ವಿದ್ಯಾರ್ಥಿನಿ ಜೆನಿಶಾ ಕೋರ್ಸ್ ಅನುಭವಗಳನ್ನು ಹಂಚಿಕೊಂಡರು. ಬಳಿಕ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

 

ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶಿವಪ್ರಸಾದ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೋರ್ಸ್ ಸಂಯೋಜಕರಾದ ಡಾ.ಎಡ್ವಿನ್ ಡಿಸೋಜ ಸ್ವಾಗತಿಸಿದರು. ವಿದ್ಯಾರ್ಥಿನಿ ಅಪರ್ಣ ಮತ್ತು ತಂಡ ಪ್ರಾರ್ಥನೆ ನೆರವೇರಿಸಿದರು. ವಿಜ್ಞಾನ ವಿಭಾಗದ ಡೀನ್ ಡಾ.ಮಾಲಿನಿ ವಂದಿಸಿದರು. ವಿದ್ಯಾರ್ಥಿನಿ ಶ್ರೇಯವಿದ್ಯಾ ಕಾರ್ಯಕ್ರಮ ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top