ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ- ಕಲಾವಿದರಿಂದ ಅರ್ಜಿ ಅಹ್ವಾನ

Upayuktha
0


ಮಂಗಳೂರು:  ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಆಯೋಜಿಸಲಾಗುವ ಚಿಗುರು, ಯುವ ಸೌರಭ, ಸಾಂಸೃತಿಕ ಸೌರಭ ಕಾರ್ಯಕ್ರಮದಲ್ಲಿ ಶಾಸ್ರ್ತೀಯ ಸಂಗೀತ, ಕರ್ನಾಟಕ/ಹಿಂದುಸ್ಥಾನಿ/ ಗಾಯನ ವಾದ್ಯ ಸಂಗೀತ,  ಸುಗಮ ಸಂಗೀತ/ವಚನ ಸಂಗೀತ, ಜನಪದ ಗೀತೆಗಳು, ಸಮೂಹ ನೃತ್ಯ/ನೃತ್ಯ ರೂಪಕ, ,ಕಥಕ್, ಮೋಹಿನಿಯಾಟಂ ,ಕೂಚಿಪುಡಿ ಒಡೆಸ್ಸಿ, (ಸೋಲೋ/ಯುಗಳ ನೃತ್ಯ), ಜನಪದ ಪ್ರದರ್ಶನ ಕಲಾ ತಂಡಗಳು, ನಾಟಕ, ಯಕ್ಷಗಾನ, ಮೂಡಲಪಾಯ, ಬಯಲಾಟ, ಗೊಂಬೆಮೇಳ, ಗಮಕ/ಕಥಾ ಕೀರ್ತನ, ಏಕಪಾತ್ರಾಭಿನಯ ಇತ್ಯಾದಿ ಈ ಕಾರ್ಯಕ್ರಮದಲ್ಲಿ ಕಲಾ ಪ್ರದರ್ಶನ ನೀಡಲು ಅವಕಾಶವಿದೆ.

ಆಯ್ಕೆಯಾದ ಕಲಾವಿದರು ಇಲಾಖೆ ನಿಗದಿಪಡಿಸಿದ ಸ್ಥಳ ಮತ್ತು ದಿನಾಂಕಗಳಂದು ಕಾರ್ಯಕ್ರಮ ನೀಡಬೇಕಾಗುತ್ತದೆ. 8 ರಿಂದ 14 ವರ್ಷದೊಳಗಿನ ಪ್ರತಿಭಾವಂತ ಮಕ್ಕಳಿಗೆ ಚಿಗುರು ಕಾರ್ಯಕ್ರಮ, 15 ರಿಂದ 30 ವರ್ಷದೊಳಗಿನ ಪ್ರತಿಭಾವಂತ ಯುವ ಕಲಾವಿದರಿಗೆ ಯುವ ಸೌರಭ ಕಾರ್ಯಕ್ರಮ ಮತ್ತು ಆಕಾಶವಾಣಿ ಬಿ ಹೈ ಗ್ರೇಡ್ ಹಾಗೂ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿ ಪುರಸ್ಕೃತ ಕಲಾವಿದರಿಂದ ಸಾಂಸ್ಕೃತಿಕ ಸೌರಭಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕಲಾವಿದರು ತಮ್ಮ ದಾಖಲೆಗಳೊಂದಿಗೆ  ನಗರದ ಉರ್ವಸ್ಟೋರ್ ತುಳು ಭವನದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ  ಕಚೇರಿಗೆ ಜೂನ್  10 ರೊಳಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ  (ದೂರವಾಣಿ ಸಂ. 0824-2951327)  ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top