ದ.ಕ. ಫ್ಲವರ್ ಡೆಕೋರೇಷನ್ ಮಾಲಕರ ಸಂಘ, ಮಂಗಳೂರು: ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Upayuktha
0


ಮಂಗಳೂರು : ದಕ್ಷಿಣ ಕನ್ನಡ ಫ್ಲವರ್ ಡೆಕೋರೇಷನ್ ಮಾಲಕರ ಸಂಘ (ರಿ) ಮಂಗಳೂರು ಉತ್ತರ ವಲಯದ ವತಿಯಿಂದ ಕರಂಬಾರು ಶ್ರೀದೇವಿ ಭಜನಾ ಮಂದಿರದ ಸಭಾಂಗಣದಲ್ಲಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಫ್ಲವರ್ ಡೆಕೋರೇಷನ್ ಮಾಲಕರ ಸಂಘದ ಅಧ್ಯಕ್ಷ ಸುಲಕ್ಷಣ ಬಿ.ರೈ. ವಹಿಸಿದ್ದರು. ಸಂಘದ ಸ್ಥಾಪಕ ಅಧ್ಯಕ್ಷ ಅಶ್ವಿತ್ ಕೊಟ್ಟಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಅನಿಲ್‌ ಕೊಟ್ಟಾರಿ, ಗೌರವ ಸಲಹೆಗಾರ ಪಕೀರಬ್ಬ ಮಾಸ್ಟರ್, ಸಂಘಟನಾ ಕಾರ್ಯದರ್ಶಿ ಶುಭಂ ನಾಯಕ್, ಕರಂಬಾರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್‌ ದೇವಾಡಿಗ, ಉತ್ತರ ವಲಯ ಅಧ್ಯಕ್ಷ ನಿಶ್ಚಿತ್ ಶ್ರೀಯಾನ್ ಹಾಗೂ ವಲಯ ಕಾರ್ಯದರ್ಶಿ ತಿಲಕ್ ರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಉತ್ತರ ವಲಯ ಅಧ್ಯಕ್ಷರಾದ ನಿಶ್ಚಿತ್ ಶ್ರೀಯಾನ್ ಸ್ವಾಗತಿಸಿ, ರಾಕೇಶ್ ಕುಂದ‌ರ್ ನಿರೂಪಿಸಿದರು. ನವೀನ್ ಚಂದ್ರ ಸಾಲ್ಯಾನ್ ಪ್ರಾಸ್ತವಿಕವಾಗಿ ಮಾತನಾಡಿದರು, ಉತ್ತರ ವಲಯದ ಕಾರ್ಯದರ್ಶಿ ತಿಲಕ್ ರಾಜ್ ಜೋಗಿ ವಂದಿಸಿದರು. ಸುಮಾರು 30 ಮಕ್ಕಳಿಗೆ ಉಚಿತ ಪುಸ್ತಕ ವಿತರಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top